ದೇಶದೆಲ್ಲೆಡೆ ಕೊರೊನಾ ಭೀತಿ ಮನೆ ಮಾಡಿದ್ದು, ವೈರಸ್ ಹರಡದಂತೆ ಆಯಾ ರಾಜ್ಯಗಳು ಕ್ರಮ ಕೈಗೊಳ್ಳುತ್ತಿವೆ. ಇದೇ ಹಿನ್ನೆಲೆಯಲ್ಲಿ ತಮ್ಮ ರಾಜ್ಯ ಸರ್ಕಾರಗಳ ಸಲಹೆಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ, ಕೇರಳ ಹಾಗೂ ದೆಲಿಯಲ್ಲಿರುವ ಪಿವಿಆರ್ ಚಿತ್ರ ಮಂದಿರಗಳನ್ನು ಮಾರ್ಚ್ 31ರವರೆಗೆ ಸ್ಥಗಿತಗೊಳಿಸಲಾಗಿದೆ.
ಈ ಬಗ್ಗೆ ಗುರುವಾರ ಪಿವಿಆರ್ ಮುಖ್ಯಸ್ಥರು ಅಧಿಕೃತವಾಗಿ ಟ್ವೀಟ್ ಮೂಲಕ ತಿಳಿಸಿದ್ದು, ಕೇರಳ, ದೆಹಲಿ, ಜಮ್ಮ ಮತ್ತು ಕಾಶ್ಮೀರ ಸರ್ಕಾರದ ಸಲಹೆಯ ಮೇರೆಗೆ ನಮ್ಮ ಪಿವಿಆರ್ ಸಿನಿಮಾವನ್ನು ಮಾರ್ಚ್ 31ರವರೆಗೆ ಸ್ಥಗಿತಗೊಳಿಸುತ್ತೇವೆ. ಕೋವಿಡ್ 19 ಭೀತಿ ಇರುವುದಿಂದ ಸರ್ಕಾರದ ಮನವಿಗೆ ನಾವು ಸ್ಪಂದಿಸುತ್ತೇವೆ ಎಂದು ಹೇಳಿದ್ದಾರೆ.