ಅಕ್ಟೋಬರ್ 19 ಶನಿವಾರ ಸಂಜೆ ಖ್ಯಾತ ಸಂಗೀತ ನಿರ್ದೇಶಕ, ಸಂಗೀತ ಮಾಂತ್ರಿಕ ಇಳಯರಾಜ ಸಂಗೀತ ರಸಸಂಜೆ ಬೆಂಗಳೂರಿನಲ್ಲಿ ಜರುಗಲಿದೆ. ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗದ ಬಹುತೇಕ ಸಿನಿಮಾ ಹಾಡುಗಳಿಗೆ ತಮ್ಮ ಸಂಗೀತದ ಮೂಲಕ ಜೀವ ತುಂಬಿರುವ ಇಳಯರಾಜ ಎವರ್ಗ್ರೀನ್ ಸಂಗೀತ ನಿರ್ದೇಶಕ ಎಂಬುತು ಸತ್ಯ.
ಸಂಗೀತ ಮಾಂತ್ರಿಕ ಇಳಯರಾಜ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ದಿನಗಣನೆ - ತಾಜ್ ವೆಸ್ಟ್ ಎಂಡ್
ಇಳಯರಾಜ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಖ್ಯಾತ ತಾರೆಗಳು ಆಗಮಿಸುವ ಸಾಧ್ಯತೆ ಇದೆ. ಅಕ್ಟೋಬರ್ 19 ರ ಸಂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಬ್ಯುಸ್ನೆಸ್ ಪಾರ್ಕಿನಲ್ಲಿ ಕಾರ್ಯಕ್ರಮ ಜರುಗಲಿದೆ.
ಈ ಸಂಗೀತ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಇಳಯರಾಜ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುಮಾರು 1000 ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನೀಡಿರುವ ದಿಗ್ಗಜ ಇಳಯರಾಜ ಜೊತೆ ನಾದಬ್ರಹ್ಮ ಹಂಸಲೇಖ ಕೂಡಾ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಅಕ್ಟೋಬರ್ 19 ರ ಸಂಜೆ ವಿಮಾನ ನಿಲ್ದಾಣದ ಬಳಿ ಇರುವ ಬ್ಯುಸ್ನೆಸ್ ಪಾರ್ಕಿನಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಇಳಯರಾಜ ನೇತೃತ್ವದ 150 ವಾದ್ಯಗಾರರು ವೇದಿಕೆ ಏರಲಿದ್ದಾರೆ. ಇವರ ಜೊತೆ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ, ಮನು, ಚಿತ್ರ ಅಂತಹ ಮಹಾನ್ ಗಾಯಕರು ಸುಮಾರು 3 ಗಂಟೆಗಳ ಕಾಲ ಸಂಗೀತ ಪ್ರಿಯರನ್ನು ರಂಜಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮಕ್ಕೆ ಟಿಕೆಟ್ ಬೆಲೆ ಕೂಡಾ ದುಬಾರಿಯಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳ ಹಾಡುಗಳನ್ನು ಗಾಯಕರು ಹಾಡಲಿದ್ದಾರೆ. ಹಾಗೆ ದಕ್ಷಿಣ ಭಾರತದ ಬಹುತೇಕ ಸ್ಟಾರ್ಗಳು ಆ ದಿನ ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆ ಇದೆ.