ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಕೋಟಿಗೊಬ್ಬ-3 ಚಿತ್ರದ ಶೂಟಿಂಗ್, ಸದ್ಯ ಹೈದರಾಬಾದ್ನ ರಾಮೋಜಿ ಫಿಲಂ ಸಿಟಿಯಲ್ಲಿ ಭರದಿಂದ ಸಾಗುತ್ತಿದೆ. ಅದ್ದೂರಿ ಬೃಹತ್ ಸೆಟ್ನಲ್ಲಿ ಲವ್ ಜೊತೆ ಆ್ಯಕ್ಷನ್ ಸೀನ್ಗಳ ಶೂಟಿಂಗ್ ನಡೆಯುತ್ತಿದೆ.
ಹೈದರಾಬಾದ್ ಕೋಟಿಗೊಬ್ಬ-3 ಶೂಟಿಂಗ್ ಅಡ್ಡಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ - undefined
ಹೈದರಾಬಾದ್ ರಾಮೋಜಿ ಫಿಲಂ ಸಿಟಿಯಲ್ಲಿ ಕೋಟಿಗೊಬ್ಬ-3 ಶೂಟಿಂಗ್ ನಡೆಯುತ್ತಿದ್ದು ಕ್ರೇಜಿಸ್ಟಾರ್ ರವಿಚಂದ್ರನ್ ಶೂಟಿಂಗ್ ಅಡ್ಡಾಕ್ಕೆ ಭೇಟಿ ನೀಡಿದ್ದಾರೆ. ರವಿ ಸರ್ ಭೇಟಿ ನನಗೆ ನಿಜಕ್ಕೂ ಖುಷಿ ನೀಡಿದೆ ಎಂದು ಸುದೀಪ್ ಹೇಳಿಕೊಂಡಿದ್ದಾರೆ.
ಚಿತ್ರದ ಶೂಟಿಂಗ್ ಸ್ಪಾಟ್ ಬಳಿ ಕ್ರೇಜಿಸ್ಟಾರ್ ರವಿಚಂದ್ರನ್ ಭೇಟಿ ನೀಡಿ ಚಿತ್ರತಂಡಕ್ಕೆ ಸರ್ಪ್ರೈಸ್ ನೀಡಿದ್ದಾರೆ. ಈ ಬಗ್ಗೆ ಕಿಚ್ಚ ಸುದೀಪ್ ಟ್ವಿಟ್ಟರ್ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಹೈದರಾಬಾದ್ನಲ್ಲಿ ನಾನಿರುವ ಸ್ಥಳಕ್ಕೆ ಸ್ಪೆಷಲ್ ಗೆಸ್ಟ್ ಒಬ್ಬರು ಸರ್ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಅವರ ಭೇಟಿ ನಿಜಕ್ಕೂ ಪರಮಾನಂದವಾಯಿತು ಎಂದು ಸುದೀಪ್ ಮನದುಂಬಿ ಮಾತನಾಡಿದ್ದಾರೆ. ಕ್ರೇಜಿಸ್ಟಾರ್ ಸುದೀಪ್ ಅವರನ್ನು ಭೇಟಿ ಮಾಡಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ರವಿಚಂದ್ರನ್ ಕೂಡಾ ಸಿನಿಮಾದಲ್ಲಿ ನಟಿಸಲಿದ್ದಾರಾ ಎಂಬ ಅನುಮಾನ ಅಭಿಮಾನಿಗಳಲ್ಲಿ ಹುಟ್ಟಿದೆ.
ಈಗಾಗಲೇ ಶೇಕಡಾ 80 ರಷ್ಟು ಚಿತ್ರೀಕರಣ ಮುಗಿದಿದ್ದು, ಮುಕ್ತಾಯದ ಹಂತಕ್ಕೆ ತಲುಪಿದೆ. ಈ ಹಿಂದೆ ಮಾಣಿಕ್ಯ ಸಿನಿಮಾದಲ್ಲಿ ಸುದೀಪ್ ಮತ್ತು ರವಿಚಂದ್ರನ್ ಒಟ್ಟಿಗೆ ನಟಿಸಿ ಸೂಪರ್ ಜೋಡಿ ಎನಿಸಿಕೊಂಡಿದ್ದರು. ಇದೀಗ ಕೋಟಿಗೊಬ್ಬ-3 ನಲ್ಲೂ ಇವರಿಬ್ಬರು ಒಂದಾದ್ರೂ ಅಚ್ಚರಿ ಪಡಬೇಕಾಗಿಲ್ಲ. ಚಿತ್ರಕ್ಕೆ ಶಿವಕಾರ್ತಿಕ್ ನಿರ್ದೇಶನವಿದ್ದು ಸೂರಪ್ಪ ಬಾಬು ಬಂಡವಾಳ ಹೂಡಿದ್ದಾರೆ.