ಕರ್ನಾಟಕ

karnataka

ETV Bharat / sitara

ನಟ ದರ್ಶನ್​ ಆಸ್ಪತ್ರೆಗೆ ದಾಖಲು... ಹೊಟ್ಟೆನೋವಿಗೆ ಚಿಕಿತ್ಸೆ ಪಡೆಯುತ್ತಿರುವ ದಚ್ಚು - ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿರುವ ದರ್ಶನ್

ವಿಷಯ ತಿಳಿಯುತ್ತಿದ್ದಂತೆ ದರ್ಶನ್‌ ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಆದರೆ ಅಭಿಮಾನಿಗಳು ಹಾಗೂ ಯಾರಿಗೂ ನನ್ನನ್ನು ನೋಡಲು ಬೀಡಬಾರದು. ನಾಳೆ ಆಸ್ಪತ್ರೆಯಿಂದ ಡಿಸ್ಚಾಜ್೯ ಆಗುವವರೆಗೂ ಯಾರಿಗೆ ಮಾಹಿತಿ ನೀಡಬಾರದು ಎಂದು ದರ್ಶನ್ ವೈದ್ಯರ ಬಳಿ ಕೇಳಿಕೊಂಡಿದ್ದರು ಎನ್ನಲಾಗಿದೆ.

Darshan
ದರ್ಶನ್​

By

Published : Mar 4, 2020, 5:00 PM IST

Updated : Mar 4, 2020, 5:17 PM IST

ಮೈಸೂರು:ಗ್ಯಾಸ್ಟ್ರಿಕ್‌ ಸಮಸ್ಯೆಯಿಂದ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ನಟ ದರ್ಶನ್‌ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದ್ದಕ್ಕಿದ್ದಂತೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಒಂದು ದಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ದರ್ಶನ್‌ ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಆದರೆ ಅಭಿಮಾನಿಗಳು ಹಾಗೂ ಯಾರಿಗೂ ನನ್ನನ್ನು ನೋಡಲು ಬೀಡಬಾರದು. ನಾಳೆ ಆಸ್ಪತ್ರೆಯಿಂದ ಡಿಸ್ಚಾಜ್೯ ಆಗುವವರೆಗೂ ಯಾರಿಗೆ ಮಾಹಿತಿ ನೀಡಬಾರದು ಎಂದು ದರ್ಶನ್ ವೈದ್ಯರ ಬಳಿ ಕೇಳಿಕೊಂಡಿದ್ದರು ಎನ್ನಲಾಗಿದೆ. ದರ್ಶನ್​​​ಗೆ ಚಿಕಿತ್ಸೆ ನೀಡುತ್ತಿದ್ದು ಅವರು ಆರೋಗ್ಯವಾಗಿದ್ದಾರೆ. ಶೀಘ್ರವೇ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

Last Updated : Mar 4, 2020, 5:17 PM IST

For All Latest Updates

TAGGED:

ABOUT THE AUTHOR

...view details