ಸದ್ಯ ಕರ್ನಾಟಕದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಹಲವರು ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಈ ವಿಚಾರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಿಂದೆ ಹೇರಿಕೆ ವಿರೋಧಿಸಿ ಮತ್ತು ಹಿಂದಿ ರಾಷ್ಟ್ರಭಾಷೆ ಎಂದು ಒಪ್ಪಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ಬಹಳ ವರ್ಷಗಳಿಂದಲೂ ಈ ಹಿಂದಿ ಹೇರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ ನಮ್ಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯುಂಟಾಗುತ್ತಿದೆ. ಇದನ್ನು ಪ್ರತಿಭಟಿಸದೆ ನಾವು ಸುಮ್ಮನಿದ್ದರೆ ಮುಂದೆ ಕನ್ನಡಿಗ ಎನ್ನುವ ಅಸ್ತಿತ್ವವೇ ದೂರವಾಗುವ ದಿನಗಳು ಹತ್ತಿರದಲ್ಲೇ ಇವೆ.