ಕಳೆದ ಗುರುವಾರ ಥಿಯೇಟರ್ಗಳಿಗೆ ಲಗ್ಗೆ ಇಟ್ಟು ಬಾಕ್ಸ್ ಆಫೀಸ್ನಲ್ಲಿ ದರ್ಶನ್ ಅಭಿನಯದ ಒಡೆಯ ಧೂಳೆಬ್ಬಿಸುತ್ತಿದ್ದಾನೆ. ಒಡೆಯ ಸಿನಿಮಾ ನೋಡಿದ ಅಭಿಮಾನಿಗಳಿಂದ ಒಳ್ಳೆಯ ಪ್ರತಿಕ್ರಿಯೆ ಬರುತ್ತಿದೆ. ಇದೇ ಹಿನ್ನೆಲೆಯಲ್ಲಿ ಸಿನಿಮಾ ನೋಡಿದ ಅಭಿಮಾನಿಗಳಿಗೆ, ಸೆಲೆಬ್ರಿಟಿಗಳಿಗೆ ಹಾಗೂ ಸ್ನೇಹಿತರಿಗೆ ದರ್ಶನ್ ಧನ್ಯವಾದ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ದರ್ಶನ್, ಕಳೆದ ವರ್ಷ ಯಾವುದೇ ಚಿತ್ರ ಬಿಡುಗಡೆಯಾಗದಿದ್ದರೂ ತಾಳ್ಮೆಯಿಂದ ಕಾದು ಈ ವರ್ಷ ಬಿಡುಗಡೆಯಾದ 3 ಚಿತ್ರಗಳಿಗೂ ನೀವು ತೋರಿರುವ ಪ್ರೀತಿ-ಅಭಿಮಾನಕ್ಕೆ ಧನ್ಯವಾದಗಳು.