ಕರ್ನಾಟಕ

karnataka

ETV Bharat / sitara

'ಕೆಣಕಲು, ಪ್ರಚೋದಿಸಲು ಬರಬೇಡಿ..' ದರ್ಶನ್​​​ ವಾರ್ನಿಂಗ್ ಕೊಟ್ಟಿದ್ದು ಯಾರಿಗೆ? - ಕಿಚ್ಚ ಸುದೀಪ್​​​​

ಇಂದು ಟ್ವಿಟರ್‌ನಲ್ಲಿ ನಟ ದರ್ಶನ್​ ಒಂದು ಪೋಸ್ಟ್​​​ ಮಾಡಿದ್ದಾರೆ. ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಈಗ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು- ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು, ಪ್ರಚೋದಿಸಲು ಬರಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದು ದರ್ಶನ್ ಯಾರಿಗೆ ವಾರ್ನಿಂಗ್ ಮಾಡಿದ್ರು ಅನ್ನೋದು ಚರ್ಚೆಗೆ ಗ್ರಾಸವಾಗಿದೆ.

ದರ್ಶನ್​​​, ನಟ

By

Published : Sep 17, 2019, 3:16 PM IST

ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ವಾರ್ ಹೊಸತಲ್ಲ. ಸ್ಟಾರ್ ನಟರು ಸುಮ್ಮನಿದ್ದರೂ ಅವರ ಅಭಿಮಾನಿಗಳು ಮಾತ್ರ ಸೋಷಿಯಲ್ ಮೀಡಿಯಾಗಳಲ್ಲಿ ಆಯಾ ನೆಚ್ಚಿನ ನಟನ ಪರವಾಗಿ ಅತಿರೇಕದ ಅಭಿಮಾನ ತೋರಿಸುವ ಪ್ರವೃತ್ತಿ ಇತ್ತೀಚೆಗೆ ಹೆಚ್ಚಾಗುತ್ತಿದೆ.

ಒಂದು ಕಾಲದಲ್ಲಿ ಕುಚಿಕು ಗೆಳೆಯರಂತೆ ಇದ್ದ ದರ್ಶನ್ ಮತ್ತು ಸುದೀಪರನ್ನ ಅಭಿಮಾನಿಗಳು ವೈರಿಗಳಂತೆ ಬಿಂಬಿಸುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಆರೋಪ ಮಾಡುವುದು, ಬಾಯಿಗೆ ಬಂದಂತೆ ಕಮೆಂಟ್ ಮಾಡುವುದು ಹೆಚ್ಚಾಗುತ್ತಿದೆ.

ಈ ಮಧ್ಯೆ ಮೊನ್ನೆ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ ಸಿನಿಮಾ ಬಿಡುಗಡೆಯಾದ ಒಂದೇ ದಿನಕ್ಕೆ ಚಿತ್ರ ಆನ್ ಲೈನ್‌ನಲ್ಲಿ ಸೋರಿಕೆಯಾಗಿದೆ. ಪೈಲ್ವಾನ್ ಪೈರಸಿಯಾಗಿದೆ. ದರ್ಶನ್ ಅಭಿಮಾನಿಗಳೇ ಸಿನಿಮಾದ ಪೈರಸಿ ಮಾಡಿ ಚಿತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಚ್ಚನ ಫ್ಯಾನ್ಸ್ ಆರೋಪ ಮಾಡಿದರು. ಈ ಆರೋಪ, ಪ್ರತ್ಯಾರೋಪ, ಕಿತ್ತಾಟಗಳು ಜೋರಾಗಿಯೇ ನಡೆಯುತ್ತಿದೆ.

ಇನ್ನೊಂದೆಡೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮಾಡಿರುವ ಕರ್ಮದ ಟ್ವೀಟ್ ಭಾರಿ ಸದ್ದು ಮಾಡುತ್ತಿದೆ. ಇವೆಲ್ಲಕ್ಕೂ ಪೂರಕವೆಂಬಂತೆ ದರ್ಶನ್ ಇಂದು ತಮ್ಮ ಟ್ವಿಟರ್ ಖಾತೆಯಲ್ಲಿ ಒಂದು ಹೇಳಿಕೆಯನ್ನು ಪೋಸ್ಟ್ ಮಾಡಿದ್ದು, ಸ್ಟಾರ್ ವಾರ್ ಮತ್ತಷ್ಟು ಪುಷ್ಠಿ ನೀಡಿದಂತಾಗಿದೆ. ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು-ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು, ಪ್ರಚೋದಿಸಲು ಬರಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದು ದರ್ಶನ್ ಯಾರಿಗೆ ವಾರ್ನಿಂಗ್ ಮಾಡಿದ್ರು ಅನ್ನೋದು ಚರ್ಚೆಗೆ ಗ್ರಾಸವಾಗಿದೆ.

ABOUT THE AUTHOR

...view details