ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ, ರಾಜ್ಯದ ಜನತೆ ಅಲ್ಲದೇ ಸಿನಿಮಾ ರಂಗದವರು ಅಭಿನಂದನೆಗಳನ್ನ ಹೇಳಿದ್ದಾರೆ. ಕಿಚ್ಚ ಸುದೀಪ್, ಜಗ್ಗೇಶ್ ಸೇರಿದಂತೆ ಕನ್ನಡ ಚಿತ್ರರಂಗದವರು ಬಸವರಾಜ ಬೊಮ್ಮಾಯಿಗೆ ವಿಶ್ ಮಾಡಿದ್ದಾರೆ.
ಇದೀಗ ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ, ಗಮನ ಸೆಳೆದಿರುವ ನಾಗತಿಹಳ್ಳಿ ಚಂದ್ರಶೇಖರ್, ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಒಂದು ಕಿವಿ ಮಾತು ಹೇಳಿದ್ದಾರೆ. ಹೈಕಮಾಂಡ್, ಲೋಕಮ್ಯಾಂಡ್ ಹಂಗುಮೀರಿ ಅದ್ಭುತ ಕೆಲಸ ಮಾಡಿ. ಚಮಚಾಗಳನ್ನು ದೂರವಿಟ್ಟು ಕೆಲಸ ಮಾಡಿ ಎಂದು ನಾಗತಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದ್ದಾರೆ.
ನಿಮ್ಮ ಮನುಷ್ಯ ಪ್ರೀತಿ, ಸಾಹಿತ್ಯ ಪ್ರೀತಿ, ಪ್ರಾಣಿ ಪ್ರೀತಿ ಉಳ್ಳ ನೀವು ನನ್ನಂಥವರಿಗೆ ಆಸೆ ಹುಟ್ಟಿಸಿದ್ದೀರಿ ಎಂದು ಚಂದ್ರಶೇಖರ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕ ಚಂದ್ರಶೇಖರ್, ಪ್ರೀತಿಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಮನುಷ್ಯ ಪ್ರೀತಿ, ಸಾಹಿತ್ಯ ಪ್ರೀತಿ, ಪ್ರಾಣಿ ಪ್ರೀತಿ ಉಳ್ಳ ನೀವು ನನ್ನಂಥವರಿಗೆ ಆಸೆ ಹುಟ್ಟಿಸಿದ್ದೀರಿ.
ಹೈಕಮಾಂಡ್, ಲೋ ಕಮ್ಯಾಂಡ್ ಹಂಗು ಮೀರಿ ಅದ್ಭುತ ಕೆಲಸ ಮಾಡಿ. ಚಮಚಾಗಳನ್ನು ದೂರವಿಟ್ಟು ಕೆಲಸ ಮಾಡಿ, ಸಮಾಜದ ಕಟ್ಟ ಕಡೆಯ ಜೀವದ ಬಗ್ಗೆ ಕಾಳಜಿ ಇರಲಿ. ಅಧಿಕಾರವು ಅಲ್ಪಕಾಲೀನ, ನಿಮಗೆ ಒಳಿತಾಗಲಿ ಎಂದು ಟ್ವೀಟ್ ಮಾಡಿದ್ದಾರೆ.