ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನಗಲಿ ತಿಂಗಳುಗಳೇ ಕಳೆದಿದೆ. ಆದರೆ, ಅವರ ನೆನಪು, ಅಭಿಮಾನ ಮಾತ್ರ ಹಾಗೆ ಇದೆ. ದಿನ ಕಳೆದಂತೆ ಅನೇಕ ಸ್ಟಾರ್ ನಟರು, ಗಣ್ಯರು ಅಪ್ಪು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಅದರಂತೆ ತೆಲುಗು ನಿರ್ದೇಶಕ ರಾಮ್ ಗೋಪಾಲ್ ವರ್ಮ ಪುನೀತ್ ಸಮಾಧಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.
ಪುನೀತ್ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಪ್ಪು ಕೇವಲ ಕನ್ನಡಚಿತ್ರರಂಗ ಮಾತ್ರವಲ್ಲದೇ ಬೇರೆ ಬೇರೆ ಚಿತ್ರರಂಗದಲ್ಲೂ ಅಧಿಕ ಸಂಖ್ಯೆಯ ಸ್ನೇಹಿತರನ್ನು ಹೊಂದಿದ್ದಾರೆ. ಪುನೀತ್ ಅಗಲಿಕೆ ಬಳಿಕ ಅನೇಕರು ಸಮಾಧಿಗೆ ಗೌರವ ಸಲ್ಲಿಸಿದ್ದು, ಇದೀಗ ನಿರ್ದೇಶಕ ಆರ್ಜಿವಿ, ನಟಿಯರಾದ ಅಪ್ಸರರಾಣಿ ಹಾಗೂ ನೈನಾಗಂಗೂಲಿ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಭೇಟಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ, ಆರ್ಜಿವಿ ನಟ ರಾಘವೇಂದ್ರ ರಾಜ್ ಕುಮಾರ್, ಮಗ ಯುವ ರಾಜ್ ಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದರು.