ಕರ್ನಾಟಕ

karnataka

ETV Bharat / sitara

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ದೊಡ್ಡರಂಗೇಗೌಡ ಆಯ್ಕೆ - Doddarange Gowda news

ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ದೊಡ್ಡರಂಗೇಗೌಡರು ಆಯ್ಕೆಯಾಗಿದ್ದಾರೆ.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ದೊಡ್ಡರಂಗೇಗೌಡ ಆಯ್ಕೆ
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ದೊಡ್ಡರಂಗೇಗೌಡ ಆಯ್ಕೆ

By

Published : Jan 23, 2021, 3:59 PM IST

ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ದೊಡ್ಡರಂಗೇಗೌಡರು ಆಯ್ಕೆಯಾಗಿದ್ದಾರೆ.

ನಿನ್ನೆ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೊಡ್ಡರಂಗೇಗೌಡರನ್ನು ಆಯ್ಕೆ ಮಾಡಲಾಗಿದೆ.

ಸಭೆಯಲ್ಲಿ ಮಾತನಾಡಿದ್ದ ಮನು ಬಳಿಗಾರ್, ಈ ಅಧ್ಯಕ್ಷರ ಆಯ್ಕೆ ಪಟ್ಟಿಯಲ್ಲಿ ಗೊ.ರು. ಚನ್ನಬಸಪ್ಪ, ವೀಣಾ ಶಾಂತೇಶ್ವರ, ಎಸ್.ಆರ್. ಗುಂಜಾಳ್, ಕೆ.ಎಸ್. ಭಗವಾನ್ ಸೇರಿದಂತೆ ಹಲವರ ಹೆಸರುಗಳನ್ನು ಸೂಚಿಸಲಾಗಿತ್ತು. ಆದ್ರೆ ಅಂತಿಮವಾಗಿ ದೊಡ್ಡರಂಗೇಗೌಡರನ್ನು ಆಯ್ಕೆ ಮಾಡಲಾಯಿತು ಎಂದರು.

ಇದೇ ವೇಳೆ ಮಾತನಾಡಿದ ಮನು ಬಳಿಗಾರ್​​, ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿ ಸಮ್ಮೇಳನ ನಡೆಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.

ABOUT THE AUTHOR

...view details