ದೊಡ್ಡಬಳ್ಳಾಪುರ :ಸ್ಯಾಂಡಲ್ವುಡ್ನ ಡ್ರಗ್ಸ್ ದಂಧೆಯ ಆರೋಪದಲ್ಲಿ ನಟ-ನಟಿಯರು ಸಿಲುಕಿದ್ದು, ಕನ್ನಡ ಕಿರುತೆರೆಯ ಖ್ಯಾತ ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿಯಿಂದ ನೋಟಿಸ್ ಬಂದಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
ಮಾದಕ ಲೋಕದಲ್ಲಿ ಸಿಲುಕಿರುವ ಸ್ಯಾಂಡಲ್ವುಡ್ನಲ್ಲಿ ದಿನಕಳೆದಂತೆ ಡ್ರಗ್ಸ್ ಪ್ರಕರಣದಲ್ಲಿ ನಟ-ನಟಿಯರು ಹೆಸರು ಕೇಳಿ ಬರುತ್ತಿವೆ. ಕನ್ನಡ ಕಿರುತೆರೆಯ ಖ್ಯಾತ ನಿರೂಪಕ ಅಕುಲ್ ಬಾಲಾಜಿಯ ಹೆಸರು ಡ್ರಗ್ಸ್ ದಂಧೆಯಲ್ಲಿ ಕೇಳಿ ಬಂದಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ಅಕುಲ್ಗೆ ನೋಟಿಸ್ ನೀಡಿದೆ.
ಕಿರುತೆರೆ ನಿರೂಪಕ ಅಕುಲ್ ಬಾಲಾಜಿ ಫಾರ್ಮ್‌ಹೌಸ್.. ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಬಳಿಯ ಲಗುಮೇನಹಳ್ಳಿಯಲ್ಲಿ ಅಕುಲ್ ಬಾಲಾಜಿ ಒಡೆತನದ ಫಾರ್ಮ್‌ಹೌಸ್ ಇದೆ. ಈ ಫಾರ್ಮ್‌ಹೌಸ್‌ನಲ್ಲಿ ಫೇಜ್-3 ಪಾರ್ಟಿಗಳು ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿವೆ. ಡ್ರಗ್ಸ್ ಪಾರ್ಟಿ ಆಯೋಜನೆ ಮಾಡಿರುವ ಮಾಹಿತಿಯೂ ಇದೆಯಂತೆ. ಈ ಪಾರ್ಟಿಗಳಲ್ಲಿ ನಟ-ನಟಿಯರು, ಶ್ರೀಮಂತರ ಮಕ್ಕಳು ಪಾಲ್ಗೊಂಡಿದ್ದರು ಎಂಬ ಆರೋಪವಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಕುಲ್ ಬಾಲಾಜಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ ಎನ್ನಲಾಗ್ತಿದೆ.
ಲಾಕ್ಡೌನ್ ಸಮಯದಲ್ಲಿ ಅಕುಲ್ ಬಾಲಾಜಿ ಒಡೆತನದ ಫಾರ್ಮ್ ಹೌಸ್‌ನಲ್ಲಿ ಮದುವೆ ಆಯೋಜನೆ ಮಾಡಿದ ಬಗ್ಗೆ ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.