ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಪುನೀತ್ ರಾಜ್‍ಕುಮಾರ್ ಮರೆಯಾಗಿ ಇಂದಿಗೆ 7 ದಿನಗಳು ಕಳೆದಿವೆ. 5ನೇ ದಿನಕ್ಕೆ ರಾಜ್ ಕುಟುಂಬದಿಂದ ಹಾಲು-ತುಪ್ಪ ಕಾರ್ಯಕ್ರಮ ನೆರವೇರಿಸಲಾಗಿತ್ತು.
11ನೇ ದಿನಕ್ಕೆ ಪುನೀತ್ ರಾಜ್‍ಕುಮಾರ್ ವೈಕುಂಠ ಸಮಾರಾಧನೆ ಕಾರ್ಯಕ್ರಮ ನೆರವೇರಿಸಲು ಕುಟುಂಬ ವರ್ಗ ತೀರ್ಮಾನಿಸಿದೆ. ಬಳಿಕ 12ನೇ ದಿನದಿಂದು ಅಭಿಮಾನಿಗಳಿಗಾಗಿ ಪ್ಯಾಲೇಸ್ ಗ್ರೌಂಡ್ನಲ್ಲಿ ಕಾರ್ಯಕ್ರಮ ಏರ್ಪಡಿಸಲು ಕುಟುಂಬಸ್ಥರು ನಿರ್ಧರಿಸಿದ್ದೇವೆ ಎಂದು ಪಾರ್ವತಮ್ಮ ರಾಜ್‍ಕುಮಾರ್ ಸಹೋದರ ಹಾಗೂ ನಿರ್ಮಾಪಕ ಚಿನ್ನೇಗೌಡ ತಿಳಿಸಿದ್ದಾರೆ.