ಬೆಂಗಳೂರು: ಕೊರೊನಾ ಲಾಕ್ ಡೌನ್ ಸಮಯದಲ್ಲಿ ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿ ಮನೆಯಿಂದ ಹೊರಬಂದು ಕಾರು ಆ್ಯಕ್ಸಿಡೆಂಟ್ ಮಾಡಿಕೊಂಡಿದ್ದ ಶರ್ಮಿಳಾ ಮಾಂಡ್ರೆಗೆ ಹೌಗ್ರೌಂಡ್ ಸಂಚಾರಿ ಪೊಲೀಸರು ಇತ್ತೀಚೆಗೆ ಕ್ಲೀನ್ಚಿಟ್ ನೀಡಿದ್ರು. ಇದೀಗ ನಟಿ ನನಗೆ ಕೊರೊನಾ ಪಾಸಿಟಿವ್ ದೃಢವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್....ಅಸಲಿ ವಿಚಾರ ಏನು..? - Clean chit to Sharmila mandre
ಕಾರು ಅಪಘಾತ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದಿದ್ದ ನಟಿ ಶರ್ಮಿಳಾ ಮಾಂಡ್ರೆ ಇದೀಗ ತನಗೆ ಕೊರೊನಾ ಪಾಸಿಟಿವ್ ಇದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಬೇಕಾಗುವ ಭಯಕ್ಕೆ ನಟಿ ಸುಳ್ಳು ಹೇಳುತ್ತಿದ್ದಾರೆ ಎನ್ನಲಾಗುತ್ತಿದೆ.
'ನನಗೂ ಸೇರಿದಂತೆ ನನ್ನ ಮನೆಯ ಕೆಲವು ಸದಸ್ಯರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ವೈದ್ಯರ ಸೂಚನೆ ಪ್ರಕಾರ ನಾವು ಮನೆಯಲ್ಲೇ ಕ್ವಾರಂಟೈನ್ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದೇವೆ' ಎಂದು ಶರ್ಮಿಳಾ ಹೇಳಿಕೊಂಡಿದ್ದಾರೆ. ಆದರೆ ವಿಚಾರಣೆಯ ಭಯಕ್ಕೆ ಆಕೆ ಇಲ್ಲದ ನೆಪ ಹೇಳುತ್ತಿದ್ದಾರೆ ಎಂಬ ಅನುಮಾನ ಕಾಡತೊಡಗಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಟಿಯ ಕಾರು ಅಪಘಾತದ ಬಗ್ಗೆ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಶರ್ಮಿಳಾ ಮಾಂಡ್ರೆ, ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.
'ನಮ್ಮದು ಗೌರವಯುತವಾದ ಕುಟುಂಬ. ನಮಗೂ ಈ ಡ್ರಗ್ಸ್ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ತಂದೆ, ತಾತನಿಗೆ ಒಳ್ಳೆಯ ಹೆಸರಿದೆ. ನಾನು ಅವರ ಗೌರವಕ್ಕೆ ಧಕ್ಕೆ ತರುವಂತೆ ಕೆಲಸ ಮಾಡುವುದಿಲ್ಲ' ಎಂದು ಶರ್ಮಿಳಾ ಹೇಳಿದ್ದರು. ಆದರೆ ನಿನ್ನೆ ಸ್ಯಾಂಡಲ್ವುಡ್ ಸ್ಟಾರ್ ನಟಿಯೊಬ್ಬರಿಗೆ ಸಿಸಿಬಿ ಅಧಿಕಾರಿಗಳು ನೋಟೀಸ್ ನೀಡಿದ ಬೆನ್ನಲ್ಲೇ ಶರ್ಮಿಳಾ ಮಾಂಡ್ರೆಗೂ ಭಯ ಕಾಡತೊಡಗಿದೆ. ಹಾಗಾಗಿ ಕೊರೊನಾ ಪಾಸಿಟಿವ್ ಬಂದಿದೆ ಎಂಬ ನಾಟಕ ಮಾಡುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.