ಸೆಲಬ್ರಿಟಿಗಳ ಹೆಸರು ಹೇಳಿಕೊಂಡು ಜನರನ್ನು ಮೋಸ ಮಾಡುವ ಎಷ್ಟೋ ಉದಾಹರಣೆಗಳನ್ನು ನಾವು ಕೇಳಿದ್ದೇವೆ. ಹೀಗೆ ಮೋಸ ಹೋದವರು ನಂತರ ಪೊಲೀಸ್ ಠಾಣೆ ಮೆಟ್ಟಿಲು ಕೂಡಾ ಏರಿದ್ದಾರೆ. ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಇಂತಹ ಘಟನೆಗಳು ಮತ್ತೆ ಮತ್ತೆ ಜರುಗುತ್ತಲೇ ಇರುತ್ತವೆ.
ರಾಜಮೌಳಿ ಹೆಸರಿನಲ್ಲಿ ಮೋಸ... ಎಚ್ಚರದಿಂದ ಇರುವಂತೆ ಮನವಿ ಮಾಡಿದ ಸ್ಟಾರ್ ನಿರ್ದೇಶಕ - ಜ್ಯೂನಿಯರ್ ಎನ್ಟಿಆರ್
ನಿರ್ದೇಶಕ ಎಸ್.ಎಸ್.ರಾಜಮೌಳಿ ಹೆಸರಿನಲ್ಲಿ ಕೆಲವರು ನಕಲಿ ಸೋಷಿಯಲ್ ಮೀಡಿಯಾ ಖಾತೆ ಸೃಷ್ಟಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಈ ಖಾತೆಗಳಲ್ಲಿ ಆರ್ಆರ್ಆರ್ ಚಿತ್ರಕ್ಕೆ ನಟ-ನಟಿಯರು ಬೇಕು ಎಂದು ಸುಳ್ಳು ಪೋಸ್ಟ್ ಹಾಕುತ್ತಿದ್ದು, ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ರಾಜಮೌಳಿ ಮನವಿ ಮಾಡಿದ್ದಾರೆ.
ಇದೀಗ ಟಾಲಿವುಡ್ ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ ಹೆಸರು ಬಳಸಿಕೊಂಡು ಜನರನ್ನು ಮೋಸ ಮಾಡುತ್ತಿರುವ ವಿಷಯ ಬೆಳಕಿಗೆ ಬಂದಿದೆ. ರಾಜಮೌಳಿ ಪ್ರಸ್ತುತ ಆರ್ಆರ್ಆರ್ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್ ಸೃಷ್ಟಿ ಮಾಡಿ ಆರ್ಆರ್ಆರ್ ಚಿತ್ರಕ್ಕೆ ನಟ-ನಟಿಯರು ಬೇಕಾಗಿದ್ದಾರೆ ಎಂದು ಸುಳ್ಳು ಪೋಸ್ಟ್ ಹಾಕುತ್ತಿದ್ದಾರೆ ಎನ್ನಲಾಗಿದೆ. ಈ ವಿಷಯ ನಿರ್ದೇಶಕ ರಾಜಮೌಳಿ ಗಮನಕ್ಕೆ ಬಂದಿದೆ. ನನ್ನ ಸಿನಿಮಾಗೆ ಆ್ಯಕ್ಟರ್ಗಳು ಬೇಕಾದಲ್ಲಿ ನಾನಾಗಲಿ ನಮ್ಮ ಸಿನಿಮಾ ತಂಡವಾಗಲಿ ಮಾಧ್ಯಮದ ಮೂಲಕ ನಿಮ್ಮನ್ನು ಸಂಪರ್ಕಿಸುತ್ತೇವೆ. ಆದರೆ ಈ ರೀತಿಯ ಸುಳ್ಳು ಜಾಹೀರಾತುಗಳನ್ನು ನಂಬಬೇಡಿ. ಸೋಶಿಯಲ್ ಮೀಡಿಯಾದಲ್ಲಿ ನನ್ನ ಹೆಸರಿನಲ್ಲಿ ಸಾಕಷ್ಟು ನಕಲಿ ಖಾತೆಗಳನ್ನು ಸೃಷ್ಟಿಸಿದ್ದಾರೆ. ಇದರ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ರಾಜಮೌಳಿ ಹೇಳಿದ್ದಾರೆ.
ರಾಮ್ಚರಣ್ ತೇಜ ಹಾಗೂ ಜ್ಯೂನಿಯರ್ ಎನ್ಟಿಆರ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಸುಮಾರು 350 ಕೋಟಿ ರೂಪಾಯಿ ಬಜೆಟ್ನಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಬಾಲಿವುಡ್ ನಟರಾದ ಆಲಿಯಾ ಭಟ್ ಹಾಗೂ ಅಜಯ್ ದೇವಗನ್ ಕೂಡಾ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಮುಂದಿನ ವರ್ಷ ಜುಲೈ 30ರಂದು ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.