ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ 'ಪೈಲ್ವಾನ್' ಚಿತ್ರದ ಆಡಿಯೋ ನಿನ್ನೆ ಬಿಡುಗಡೆಯಾಗಿದೆ. ಕೋರಮಂಗಲದ ಇಂಡೋರ್ ಸ್ಟೇಡಿಯಂನಲ್ಲಿ ನಡೆದ 'ಪೈಲ್ವಾನ್' ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಿಚ್ಚನ ಅಭಿಮಾನಿಗಳು ಮುಗಿಬಿದ್ದಿದ್ದರು.
'ಪೈಲ್ವಾನ್' ಆಡಿಯೋ ಬಿಡುಗಡೆ ಕಾರ್ಯಕ್ರಮ ನೋಡಲು ಮುಗಿಬಿದ್ದ ಕಿಚ್ಚನ ಅಭಿಮಾನಿಗಳು! - ಕಿಚ್ಚನ ಅಭಿಮಾನಿಗಳು
ಆಗಸ್ಟ್ 9ರಂದು ನಡೆಯಬೇಕಿದ್ದ ಕಿಚ್ಚ ಸುದೀಪ್ ಅಭಿನಯದ 'ಪೈಲ್ವಾನ್' ಚಿತ್ರದ ಆಡಿಯೋ ನಿನ್ನೆ ಬಿಡುಗಡೆಯಾಗಿದೆ. ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಿಚ್ಚನ ಅಭಿಮಾನಿಗಳು ಮುಗಿಬಿದ್ದಿದ್ದರು. ಕೃಷ್ಣ ನಿರ್ದೇಶನದ ಈ ಸಿನಿಮಾವನ್ನು ಸ್ವಪ್ನ ಕೃಷ್ಣ ನಿರ್ಮಿಸಿದ್ದಾರೆ.
ಈ ಹಿಂದೆ ಪೈಲ್ವಾನ್ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ಆಗಸ್ಟ್ 9ರಂದು ವರಮಹಾಲಕ್ಷ್ಮಿ ಹಬ್ಬದಂದು ಕೋಟೆನಾಡು ಚಿತ್ರದುರ್ಗದಲ್ಲಿ ಏರ್ಪಡಿಸಲಾಗಿತ್ತು. ಆದರೆ ಉತ್ತರ ಕರ್ನಾಟಕದ ಜನರು ನೆರೆಯಿಂದ ಕಷ್ಟ ಪಡುತ್ತಿರುವಾಗ ಈ ಆಡಿಯೋ ಸಮಾರಂಭ ನಡೆಸಲು ನನಗೆ ಮನಸ್ಸು ಒಪ್ಪುತ್ತಿಲ್ಲ ಎಂದು ಸುದೀಪ್ ಕಾರ್ಯಕ್ರಮವನ್ನು ಮುಂದೂಡಿದ್ದರು. ಅದರಂತೆ ನಿನ್ನೆ ಬೆಂಗಳೂರಿನ ಕೋರಮಂಗಲದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ಜರುಗಿದೆ.
ಇನ್ನು ಖಾಸಗಿ ವಾಹಿನಿಯೊಂದು ಪೈಲ್ವಾನ್ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ಪ್ರಸಾರದ ಹಕ್ಕನ್ನು ಪಡೆದಿದ್ದರಿಂದ ಕೆಲವೇ ಕೆಲವು ಪಾಸ್ಗಳನ್ನು ವಿತರಿಸಲಾಗಿತ್ತು. ನೆಚ್ಚಿನ ನಟನ ಸಿನಿಮಾ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಅಭಿಮಾನಿಗಳು ಪರದಾಡುತ್ತಿರುವುದು ಕಂಡುಬಂತು. ಪಾಸ್ ದೊರಕದವರು ಗೇಟ್ ಒಳಹೋಗಲು ಹರಸಾಹಸ ಪಡುತ್ತಿದ್ದರು. ಆದರೆ ಸ್ಥಳದಲ್ಲಿ ಪೊಲೀಸ್ ವ್ಯವಸ್ಥೆ ಏರ್ಪಡಿಸಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದೆ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಸ್ವಪ್ನ ಕೃಷ್ಣ ಈ ಸಿನಿಮಾವನ್ನು ನಿರ್ಮಿಸಿದ್ದು, ಕೃಷ್ಣ ನಿರ್ದೇಶಿಸಿದ್ದಾರೆ. ಸೆಪ್ಟೆಂಬರ್ 12ರಂದು ಸಿನಿಮಾ ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಸೇರಿ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.