ನಿರ್ದೇಶಕ ಸೂರಿ ಆ್ಯಕ್ಷನ್ ಕಟ್ ಹೇಳಿರುವ, ಡಾಲಿ ಧನಂಜಯ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ 'ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾ ಥಿಯೇಟರ್ಗಳಲ್ಲಿ ಧೂಳಿಬ್ಬಿಸುತ್ತಿದೆ.
ಇಂದು ಮೈಸೂರಿನ ಗಾಯತ್ರಿ ಚಿತ್ರಮಂದಿರದಲ್ಲಿ ಸಿನಿಮಾದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಶೋ ನೋಡಲು ಪಾಪ್ ಕಾರ್ನ್ ಮಂಕಿ ಟೈಗರ್ ತಂಡ ಗಾಯತ್ರಿ ಚಿತ್ರ ಮಂದಿರಕ್ಕೆ ಭೇಟಿ ನೀಡಿತ್ತು. ಈ ವೇಳೆ ಮಂಕಿ ಸೀನನಿಗೆ ಅಭಿಮಾನಿಗಳು ಬಾಳೆಹಣ್ಣು ಗಿಫ್ಟ್ ಕೊಟ್ಟರು.