ಬಾಲಿವುಡ್ನ ಖ್ಯಾತ ನಟ ಮಿಥುನ್ ಚಕ್ರವರ್ತಿ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ನಟ ಉತ್ತರಾಖಂಡ ರಾಜ್ಯದ ಮಸ್ಸೂರಿಯಲ್ಲಿ ಸಿನಿಮಾ ಶೂಟಿಂಗ್ನಲ್ಲಿ ನಿರತರಾಗಿದ್ದರು. ಈ ವೇಳೆ ಆರೋಗ್ಯದಲ್ಲಿ ಕೊಂಚ ಬದಲಾವಣೆ ಕಂಡುಬಂದಿದ್ದು, ವಾಂತಿ-ಭೇದಿಯಾಗಿದೆ. ತಕ್ಷಣ ವೈದ್ಯರನ್ನು ಭೇಟಿ ಮಾಡಿದಾಗ ಸ್ವಲ್ಪ ಸಮಯ ವಿಶ್ರಾಂತಿ ಮಾಡುವಂತೆ ಸಲಹೆ ನೀಡಿದ್ದಾರೆ ಎಂಬ ಮಾಹಿತಿ ದೊರೆತಿದೆ.