ಬೆಂಗಳೂರು:ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್.ಜೈರಾಜ್ ನೇತೃತ್ವದಲ್ಲಿ ನಿರ್ಮಾಪಕರು ಹಾಗೂ ನಿರ್ದೇಶಕರು ಡಿಸಿಎಂ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಇದೇ ವೇಳೆ ಅಗತ್ಯ ನೆರವು ನೀಡುವಂತೆ ಮನವಿ ಸಲ್ಲಿಸಿದರು.
ಶಿವಣ್ಣನ ಅಣತಿ ಮೇಲೆ ಡಿಸಿಎಂ ಭೇಟಿಯಾದ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗ - Film Chamber
ಈಗ ಸಿನಿಮಾ ರಂಗದ ಅಭಿವೃದ್ಧಿಗೆ ಏನೆಲ್ಲಾ ಕೆಲಸಗಳಾಗಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪಧಾಧಿಕಾರಿಗಳಿಂದ ಅಶ್ವತ್ಥ್ ನಾರಾಯಣ್ ಮಾಹಿತಿ ಪಡೆದುಕೊಂಡಿದ್ದಾರೆ.
![ಶಿವಣ್ಣನ ಅಣತಿ ಮೇಲೆ ಡಿಸಿಎಂ ಭೇಟಿಯಾದ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗ](https://etvbharatimages.akamaized.net/etvbharat/prod-images/768-512-8478165-653-8478165-1597834464092.jpg)
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆದೇಶದಂತೆ ಇಂದು ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿಯಾಗಿರುವ ವಾಣಿಜ್ಯ ಮಂಡಳಿ ನಿಯೋಗ, ಸಿನಿಮಾ ರಂಗದ ಹಲವು ಬೇಡಿಕೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ವಾರದ ಹಿಂದಷ್ಟೆ ನಟ ಶಿವರಾಜ್ ಕುಮಾರ್ ಡಿಸಿಎಂ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿ ಮಾಡಿದ್ದರು. ಸಿನಿಮಾದ ಮೇಲಿನ ಜಿಎಸ್ಟಿ, ಥಿಯೇಟರ್ ಓಪನ್, ಸಬ್ಸಿಡಿ ಸೇರಿದಂತೆ ಹಲವು ಬೇಡಿಕೆಗಳನ್ನ ಸರ್ಕಾರದ ಮುಂದೆ ಇಡಲಾಗಿತ್ತು. ಸಿಎಂ ಜೊತೆ ಮಾತನಾಡಿ ನಿಮಗೆ ತಿಳಿಸುತ್ತೇನೆ ಎಂದು ಅಶ್ವತ್ಥ್ ನಾರಾಯಣ್ ಹೇಳಿದ್ದರು.
ಈಗ ಸಿನಿಮಾ ರಂಗದ ಅಭಿವೃದ್ಧಿಗೆ ಏನೆಲ್ಲಾ ಕೆಲಸಗಳಾಗಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪಧಾಧಿಕಾರಿಗಳಿಂದ ಅಶ್ವತ್ಥ್ ನಾರಾಯಣ್ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಮುಂದಿನ ವಾರ ಶಿವಣ್ಣನ ನೇತೃತ್ವದಲ್ಲಿ ಚಿತ್ರರಂಗದ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.