ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ನೆರೆ ಸಂತ್ರಸ್ತರಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಕರ್ನಾಟಕ ಚನಲಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಗುಬ್ಬಿ ಜೈರಾಜ್ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚೆಕ್ ಹಸ್ತಾಂತರಿಸಿದ್ದಾರೆ.
ಈ ವೇಳೆ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದು, ಚಿನ್ನೇಗೌಡ ಹಾಗೂ ಫಿಲ್ಮ್ ಚೇಂಬರ್ ಪದಾಧಿಕಾರಿಗಳು ಉಪಸ್ಥಿತರಿದ್ದರು.