ಶಕುನ್ ಬಾತ್ರಾ ನಿರ್ದೇಶನದ 'ಗೆಹ್ರೈಯಾನ್' ಚಿತ್ರದ ಟ್ರೈಲರ್ ಅನ್ನು ಗುರುವಾರ ಅನಾವರಣಗೊಳಿಸಲಾಯಿತು. ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಸಿದ್ಧಾಂತ್ ಚತುರ್ವೇದಿ, ಅನನ್ಯ ಪಾಂಡೆ, ಧೈರ್ಯ ಕರ್ವಾ, ನಾಸೆರುದ್ದೀನ್ ಶಾ ಮತ್ತು ರಜತ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರದ ಬಗ್ಗೆ ಪ್ರತಿಕ್ರಿಯಿಸಿದ ದೀಪಿಕಾ 'ಗೆಹ್ರಾಯನ್'ನಲ್ಲಿ ನನ್ನ ಪಾತ್ರ ಮನಸ್ಸಿಗೆ ತುಂಬಾ ಹತ್ತಿರವಾಗಿದೆ. ಜತೆಗೆ ನಾನು ತೆರೆಯ ಮೇಲೆ ನಟಿಸಿದ ಅತ್ಯಂತ ಸವಾಲಿನ ಪಾತ್ರಗಳಲ್ಲಿ ಒಂದಾಗಿದೆ. ಸವಾಲಿನ ಪಾತ್ರವನ್ನು ನಿರ್ವಹಿಸುವ ಅವಕಾಶವನ್ನು ಪಡೆದಿದ್ದಕ್ಕಾಗಿ ನಾನು ಕೃತಜ್ಞಳಾಗಿದ್ದೇನೆ ಎಂದಿದ್ದಾರೆ.