ಬೆಂಗಳೂರು:ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೂಡಾ ರಾಜನ್ ನಿಧನಕ್ಕೆ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಹೆಚ್ಡಿಕೆ ಸಂತಾಪ - HDK tweet about Rajan demise
ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಮಾಜಿ ಸಿಎಂ ಹೆಚ್ಡಿಕೆ ಸಂತಾಪ ಸೂಚಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ರಾಜನ್ ಅವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ ಎಂದು ಹೆಚ್ಡಿಕೆ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
"ಖ್ಯಾತ ಸಂಗೀತ ನಿರ್ದೇಶಕ ರಾಜನ್ ಅವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ. ಕನ್ನಡದಲ್ಲಿ 175 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದ ಖ್ಯಾತಿ ರಾಜನ್-ನಾಗೇಂದ್ರ ಜೋಡಿಯದ್ದಾಗಿತ್ತು. ಗಂಧದಗುಡಿ, ಬಯಲುದಾರಿ, ಎರಡು ಕನಸು, ಹೊಂಬಿಸಿಲು, ಆಟೋರಾಜ ಸೇರಿ ಹಲವಾರು ಚಿತ್ರಗಳ ಸಂಗೀತ ನಿರ್ದೇಶನ ಮಾಡಿದ್ದ ಅವರು ಕನ್ನಡ ಚಿತ್ರರಂಗದ ಸಂಗೀತದ ಘನತೆಯನ್ನು ಹೆಚ್ಚಿಸಿದ್ದವರು. ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ" ಎಂದು ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ.