ನಟ ರಾಘವೇಂದ್ರ ರಾಜಕುಮಾರ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ರಾಜಾಜಿನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಘವೇಂದ್ರ ರಾಜಕುಮಾರ್ ಆಸ್ಪತ್ರೆಗೆ ದಾಖಲು! - ರಾಘವೇಂದ್ರ ರಾಜ್ ಕುಮಾರ್
ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು ಆದ, ಹಿನ್ನೆಲೆಯಲ್ಲಿ ರಾಜಾಜಿನಗರದ ಕೋಲಂಬಿಯ ಏಷ್ಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಘವೇಂದ್ರ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲು!
ಬೆಳಕು ಸಿನಿಮಾದ ಚಿತ್ರೀಕರಣದಲ್ಲಿ ಇಂದು ರಾಘವೇಂದ್ರ ರಾಜಕುಮಾರ್ ಭಾಗಿಯಾಗಿದ್ದರು. ಅತಿಯಾದ ಒತ್ತಡದಿಂದ, ಉಸಿರಾಟಕ್ಕೆ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಹಿಂದೆಯೂ ತಪಾಸಣೆಗೆ ಒಳಗಾಗಿದ್ದ ರಾಘಣ್ಣ, ಸದ್ಯಕ್ಕೆ ಅವರ ಆರೋಗ್ಯ ಪರಿಸ್ಥಿತಿ ಸುಧಾರಿಸಿದೆ. ಸದ್ಯ ಪುನೀತ್ ರಾಜಕುಮಾರ್, ಮಕ್ಕಳಾದ ವಿನಯ್ ರಾಜಕುಮಾರ್, ಯುವರಾಜ್ ಕುಮಾರ್ ಆಸ್ಪತ್ರೆಗೆ ಆಗಮಿಸಿದ್ದಾರೆ.