ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿ ಸಂಜನಾ, ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಅ. 23ರಂದು (ಶುಕ್ರವಾರ) ನಡೆಸಲಿದೆ.
ನಟಿ ಸಂಜನಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ಗುರುವಾರ (ಅ.22ರಂದು) ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ನಟಿ ಪರ ವಕೀಲ ಹಸ್ಮತ್ ಪಾಷಾ ಅವರು ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಅವರ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ. ಅರ್ಜಿದಾರರು ಡ್ರಗ್ ಸೇವಿಸಿಲ್ಲ, ಮಾರಾಟ ಮಾಡಿಲ್ಲ ಅಥವಾ ಪೂರೈಕೆಯಲ್ಲೂ ತೊಡಗಿಲ್ಲ. ಪೊಲೀಸರು ಮನೆಯಲ್ಲಿ ಶೋಧ ನಡೆಸಿದಾಗ ಒಂದು ಲ್ಯಾಪ್ಟಾಪ್ ಹಾಗೂ 4 ಮೊಬೈಲ್ ಫೋನ್ಗಳು ಸಿಕ್ಕಿರುವುದು ಬಿಟ್ಟು ಬೇರೆ ಯಾವುದೇ ಮಾದಕ ವಸ್ತು ಲಭ್ಯವಾಗಿಲ್ಲ.