ಕಳೆದ ಒಂದು ವಾರದಿಂದ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಇದಕ್ಕೆ ಬಾಲಿವುಡ್ ನಟ ಹೃತಿಕ್ ರೋಶನ್ ಕಳವಳ ವ್ಯಕ್ತಪಡಿಸಿದ್ದಾರೆ.
ಬಿಹಾರ ಪ್ರವಾಹಕ್ಕೆ ಹೃತಿಕ್ ರೋಶನ್ ಕಳವಳ - ಹೃತಿಕ್ ರೋಶನ್ ಟ್ವೀಟ್
ಪಾಟ್ನಾ ಜನರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೃತಿಕ್ ರೋಶನ್, ಕಳೆದ ಒಂದು ವಾರದಿಂದ ಪಾಟ್ನಾದಲ್ಲಿ ಸುರಿಯುತ್ತಿರುವ ಮಳೆಗೆ ಅಲ್ಲಿನ ಜನರು ಕಷ್ಟ ಪಡುತ್ತಿದ್ದಾರೆ. ಇದರಿಂದ ನನ್ನ ಮನಸ್ಸು ಅವರ ಕಡೆ ಚಿಂತಿಸುತ್ತಿದೆ. ಅಲ್ಲಿನ ಪರಿಸ್ಥಿತಿ ಆದಷ್ಟು ಬೇಗ ಸುಧಾರಿಸುತ್ತದೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇವರು ಪಾಟ್ನಾ ಸಂಭದಿಸಿದಂತೆ ಸೂಪರ್ 30 ಪ್ರೋಗ್ರಾಮ್ ಸಂಸ್ಥಾಪಕ ಆನಂದ್ ಕುಮಾರ್ ನಿರ್ಮಾಣ ಮಾಡುತ್ತಿರುವ ಸೂಪರ್ 30 ಸಿನಿಮಾದಲ್ಲಿ ನಟಿಸಿದ್ದಾರೆ. ಇದೀಗ ಪಾಟ್ನಾ ಜನರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೃತಿಕ್ ರೋಶನ್, ಕಳೆದ ಒಂದು ವಾರದಿಂದ ಪಾಟ್ನಾದಲ್ಲಿ ಸುರಿಯುತ್ತಿರುವ ಮಳೆಗೆ ಅಲ್ಲಿನ ಜನರು ಕಷ್ಟ ಪಡುತ್ತಿದ್ದಾರೆ. ಇದರಿಂದ ನನ್ನ ಮನಸ್ಸು ಅವರ ಕಡೆ ಚಿಂತಿಸುತ್ತಿದೆ. ಅಲ್ಲಿನ ಪರಿಸ್ಥಿತಿ ಆದಷ್ಟು ಬೇಗ ಸುಧಾರಿಸುತ್ತದೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಬಿಹಾರದಲ್ಲಿ ಸುರಿದಿರುವ ಮಳೆಗೆ 43 ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಈ ರಾಜ್ಯದಲ್ಲಿ ಪ್ರವಾಹದ ಭೀತಿ ಉಂಟಾಗಿದ್ದು, ಇಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಲ್ಲದೆ ಪರೀಕ್ಷೆಗಳನ್ನು ಮುಂದೂಡಲಾಗಿದೆ.