ಹೈದರಾಬಾದ್: ನಟ ಪುನೀತ್ ರಾಜ್‌ಕುಮಾರ್ ಅಗಲಿಕೆಗೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ. ಪುನೀತ್ ರಾಜ್‌ಕುಮಾರ್ ಅವರ ಸಾಮಾಜಿಕ ಕಾರ್ಯಗಳ ನೆನೆದು ಚಿತ್ರರಂಗ ಕಣ್ಣೀರಿಟ್ಟಿದೆ. ಈ ನಡುವೆ ಅಪ್ಪು ಓದಿಸುತ್ತಿದ್ದ 1800 ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಹೊಣೆ ಹೊರುವುದಾಗಿ ತಮಿಳು ನಟ ವಿಶಾಲ್ ಹೇಳಿದ್ದಾರೆ.
ಹೈದರಾಬಾದ್ನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನನ್ನ ಸ್ನೇಹಿತ ಪುನೀತ್ ರಾಜ್‌ಕುಮಾರ್ ಅವರನ್ನ ಈ ವೇದಿಕೆಯಲ್ಲಿ ಈ ರೀತಿ ನೆನೆಯುತ್ತೇನೆ ಎಂದುಕೊಂಡಿರಲಿಲ್ಲ. ಅವರು 1800 ಮಕ್ಕಳಿಗೆ ಉಚಿತವಾಗಿ ವಿದ್ಯಾಭ್ಯಾಸ ನೀಡುತ್ತಿದ್ದರು. ಆ ಮಕ್ಕಳ ಜವಾಬ್ದಾರಿಯನ್ನು ನಾನು ನೋಡಿಕೊಳ್ಳುತ್ತೇನೆ ಎಂದಿದ್ದಾರೆ.