ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಶೋಗೆ ಸ್ಕ್ರಿಪ್ಟ್ ರೈಟರ್ ಆಗಿ ಕೆಲಸ ಮಾಡುತ್ತಿದ್ದ ಹರ್ಷವರ್ಧನ್ ಇಂದು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ.
ಮೂಲತಃ ತುಮಕೂರಿನ ಹರ್ಷ ಎಂಬಿಎ ಶಿಕ್ಷಣ ಪಡೆದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಸಿನಿಮಾ ಗೀಳು ಹೊಂದಿದ್ದ ಇವರು ನಟನಾಗಬೇಕೆಂದು ಕನಸು ಕಂಡಿದ್ದರು. ಹೀಗಾಗಿ, ಖಾಸಗಿ ವಾಹಿನಿಯ ಕಾಮಿಡಿ ಕಿಲಾಡಿ ಶೋಗೆ ಸ್ಕ್ರಿಪ್ಟ್ ರೈಟರ್ ಆಗಿ ಕೆಲಸ ಮಾಡುತ್ತಿದ್ದರು. 27 ವರ್ಷದ ಯುವಕ ಇಂದು ಮೃತಪಟ್ಟಿದ್ದಾರೆ. ಹರ್ಷ ಅವರ ಅಕಾಲಿಕ ನಿಧನಕ್ಕೆ ನಟ ಜಗ್ಗೇಶ್ ಕಂಬನಿ ಮಿಡಿದಿದ್ದಾರೆ.