‘ಜೇಮ್ಸ್’ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಸೈನಿಕನ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ದೇಶ ಕಾಯುವ ಯೋಧರಿಗಾಗಿ ಒಂದು ಹಾಡು ರಚಿಸಲಾಗಿದ್ದು, ಅದೇ ‘ಸಲಾಂ ಸೋಲ್ಜರ್’. ಈ ಹಾಡಿನ ಲಿರಿಕಲ್ ವಿಡಿಯೋವನ್ನು ನಟ ಕಿಚ್ಚ ಸುದೀಪ್ ಶುಕ್ರವಾರ ಬಿಡುಗಡೆಗೊಳಿಸಿದರು.
ನಿರ್ದೇಶಕ ಚೇತನ್ ಕುಮಾರ್, ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರ ಜೊತೆ ಸುದೀಪ್ ಸುಮಾರು ಅರ್ಧ ಗಂಟೆಗಳ ಕಾಲ ಮಾತನಾಡಿ, ಹಾಡಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಚೇತನ್ ಕುಮಾರ್ ನಿರ್ದೇಶನದ ಜೊತೆಗೆ ಸಾಹಿತ್ಯವನ್ನೂ ರಚಿಸಿದ್ದಾರೆ. ಈ ಹಾಡನ್ನು ಗಾಯಕ ಸಂಜಿತ್ ಹೆಗ್ಡೆ ಹಾಗೂ ಚರಣ್ ರಾಜ್ ಹಾಡಿದ್ದಾರೆ. ಪುನೀತ್ ಎರಡು ಶೇಡ್ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಿಯಾ ಆನಂದ್ ನಾಯಕಿ ನಟಿಯಾಗಿ ಅಭಿನಯಿಸಿದ್ದಾರೆ.