ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಈಗಾಗಲೇ ಹಲವು ಬಾರಿ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ನೀಡಿರುವ ಹೇಳಿಕೆ ಮತ್ತೆ ತೀವ್ರ ವಿವಾದ ಸೃಷ್ಟಿಸಿದೆ.
ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014 ರಲ್ಲಿ: ವಿವಾದಾತ್ಮಕ ಹೇಳಿಕೆ ಮೂಲಕ ಟ್ರೋಲ್ಗೆ ಗುರಿಯಾದ ಕಂಗನಾ ರಣಾವತ್
ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಾತ್ಮಕ ಹೇಳಿಕೆಗೆ ಹೆಸರುವಾಸಿಯಾಗಿದ್ದಾರೆ. ಇದೀಗ ಅಂತಹುದ್ದೇ ಮತ್ತೊಂದು ಹೇಳಿಕೆ ನೀಡುವ ಮೂಲಕ ಟ್ರೋಲ್ಗೆ ಗುರಿಯಾಗಿದ್ದಾರೆ.
ಕಂಗನಾ ರಣಾವತ್
''1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು’’ ಎಂದು ಕಂಗನಾ ಹೇಳಿದ್ದಾರೆ. ಅವರ ಈ ಮಾತಿಗೆ ಸಾಮಾಜಿಕ ಜಾಲತಾಣಗಳು ಸೇರಿದಂತೆ ಹಲವೆಡೆ ಆಕ್ಷೇಪ ವ್ಯಕ್ತವಾಗಿದೆ.
ಇದನ್ನೂ ಓದಿ:'ಸ್ವಾತಂತ್ರ್ಯ ಸಿಕ್ಕಿದ್ದು 2014 ರಲ್ಲಿ, 1947ರಲ್ಲಿ ಸಿಕ್ಕಿದ್ದು ಭಿಕ್ಷೆ': ಕಂಗನಾ ಹೇಳಿಕೆಗೆ ವರುಣ್ ಗಾಂಧಿ ಕಿಡಿ