ಭಾರತೀಯ ಚಿತ್ರರಂಗದ ಮೇರು ಗಾಯಕ ಡಾ.ಎಸ್ಪಿ ಬಾಲಸುಬ್ರಹ್ಮಣ್ಯಂ ಇಂದು ಮಧ್ಯಾಹ್ನ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಈ ಮಹಾನ್ ಗಾಯಕನ ನಿಧನಕ್ಕೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿಯುತ್ತಿದೆ.
ಎಸ್ಪಿಬಿ ನಿಧನಕ್ಕೆ ಕಂಬನಿ ಮಿಡಿದ ಚಂದನವನ ತಾರೆಯರು - death of SPB
ಎಸ್ಪಿ ಬಾಲಸುಬ್ರಹ್ಮಣ್ಯಂ ನಿಧನರಾಗಿದ್ದು, ಇವರ ಸಾವಿಗೆ ಕನ್ನಡದ ತಾರೆಯರು ಕಂಬನಿ ಮಿಡಿದಿದ್ದಾರೆ.

Breaking News
ದಕ್ಷಿಣ ಭಾರತದ ಚಿತ್ರರಂಗದಲ್ಲಿ ಅತೀ ಹೆಚ್ಚು ಹಾಡುಗಳನ್ನ ಹಾಡಿರುವ ಎಸ್ಪಿಬಿ ನಿಧನಕ್ಕೆ ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ದರ್ಶನ್, ಡಾಲಿ ಧನಂಜಯ್, ನಿರ್ದೇಶಕ ಯೋಗರಾಜ್ ಭಟ್, ನಟಿ ಸುಮಲತಾ ಅಂಬರೀಶ್, ಶಾನ್ವಿ ಶ್ರೀವಾತ್ಸವ್ ಸೇರಿದಂತೆ ಸ್ಯಾಂಡಲ್ವುಡ್ ಸ್ಟಾರ್ಸ್ ಕಂಬನಿ ಮಿಡಿದ್ದಾರೆ.