ಕರ್ನಾಟಕ

karnataka

'ಭಾನು ವೆಡ್ಸ್ ಭೂಮಿ' ಮುಂದಿನ ತಿಂಗಳು ರಿಲೀಸ್

ಪೂರ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕಿಶೋರ್ ಶೆಟ್ಟಿ ನಿರ್ಮಾಣದ ‘ಭಾನು ವೆಡ್ಸ್ ಭೂಮಿ’ ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಿದ್ದು, ಮುಂದಿನ ತಿಂಗಳು ತೆರೆಗೆ ಬರಲಿದೆ.

By

Published : May 27, 2019, 6:04 PM IST

Published : May 27, 2019, 6:04 PM IST

ಭಾನು ವೆಡ್ಸ್ ಭೂಮಿ

ನೈಜ ಘಟನೆ ಆಧಾರವಾಗಿಟ್ಟುಕೊಂಡು ಈ ಚಿತ್ರಕಥೆ ಹೆಣೆಯಲಾಗಿದೆ. ತುಂಬಾ ತಿರುವುಗಳಿಲ್ಲದಿದ್ದರೂ, ನೈಜತೆಯಿಂದ ಕೂಡಿದ ಕಥೆ. ‘ಭಾನು ಮತ್ತು ಭೂಮಿ’ ಒಬ್ಬರನ್ನೊಬ್ಬರು ನೋಡುತ್ತಾ ಸನಿಹ ಸೇರಲೆಂದು ಹಪಹಪಿಸುತ್ತಿದ್ದರೂ ಸಾಧ್ಯವಾಗದೇ ತಮ್ಮಲ್ಲೇ ಇರುವ ಭಾವನೆಗಳನ್ನು ಹೇಗೆ ವ್ಯಕ್ತಪಡಿಸುತ್ತಾರೆಂಬುದೇ ಚಿತ್ರದ ಹೂರಣ.

ಜಿ.ಕೆ.ಆದಿ ನಿರ್ದೇಶನ ಈ ಚಿತ್ರಕ್ಕೆ ಛಾಯಾಗ್ರಹಣ - ಗಣೇಶ್ ಹೆಗ್ಡೆ, ಸಂಗೀತ- ಎ.ಎಂ.ನೀಲ್, ಸಂಕಲನ- ಶ್ರೀನಿವಾಸ್.ಪಿ.ಬಾಬು, ನಿರ್ವಹಣೆ-ಗಂಡಸಿ ರಾಜು ಅವರು ಒದಗಿಸಿದ್ದಾರೆ.

ಇನ್ನು ತಾರಾಗಣದಲ್ಲಿ ಸೂರ್ಯಪ್ರಭ್, ರಕ್ಷತಾ ಮಲ್ನಾಡ್. ಶೋಭರಾಜ್, ಗಿರೀಶ್, ಮೈಕೋ ಮಂಜು, ಸಿಲ್ವಾಮೂರ್ತಿ, ಹಂಸಾ, ಸೂರ್ಯಕಿರಣ್, ಪಲ್ಲವಿ ಶೆಟ್ಟಿ, ಹೆಚ್.ಎಂ.ಟಿ. ವಿಜಿ, ಪ್ರವೀಣ್, ಮಿಮಿಕ್ರಿ ರಾಜು ಹಾಗೂ ವಿಶೇಷ ಪಾತ್ರದಲ್ಲಿ ರಂಗಾಯಣ ರಘು ಅಭಿನಯಿಸುತ್ತಿದ್ದಾರೆ.

For All Latest Updates

TAGGED:

ABOUT THE AUTHOR

...view details