ಸ್ಯಾಂಡಲ್ವುಡ್ನಲ್ಲಿ ಚಟ ಪಟ ಮಾತುಳಿಂದ ಎಲ್ಲರಿಗೂ ಇಷ್ಟ ಆಗುವ ನಟಿ ಶುಭಾ ಪೂಂಜಾ. ಸದ್ಯ ಕೊರೊನಾ ಲಾಕ್ಡೌನ್ನಿಂದ ರಿಯಾಲಿಟಿ ಶೋ ಅರ್ಧಕ್ಕೆ ನಿಲ್ಲಿಸಲಾಗಿಸಿದ್ದು, ಶುಭಾ ಪೂಂಜಾ ರಿಯಾಲಿಟಿ ಶೋ ಮುಗಿಸಿ ವಾಪಸ್ ಬರುತ್ತಿದ್ದಂತೆ ಸಾಮಾಜಿಕ ಕೆಲಸ ಶುರು ಮಾಡಿಕೊಂಡಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಇರಬೇಕಾದರೆ ಕೊರೊನಾ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವುದಾಗಿ ಹೇಳಿದ್ದರು. ನುಡಿದ ಮಾತಿನಂತೆ ಈಗ ಕೆಲಸ ಶುರುಮಾಡಿಕೊಂಡಿದ್ದಾರೆ.
ಲಾಕ್ಡೌನ್ನಿಂದಾಗಿ ಕೂಲಿ ಕಾರ್ಮಿಕರು ಹಾಗು ಅದೆಷ್ಟೋ ಜನ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಅಂಥವರಿಗೆ ಶುಭಾ ಪೂಂಜಾ, ಆಹಾರ ಧಾನ್ಯದ ಕಿಟ್ಗಳನ್ನು ವಿತರಿಸುವ ಮೂಲಕ ಅನೇಕರ ಹಸಿವನ್ನು ನೀಗಿಸುತ್ತಿದ್ದಾರೆ.
ಸಹಾಯ ಮಾಡುತ್ತಿರುವ ಫೋಟೋಗಳನ್ನು ಶುಭಾ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಜೊತೆಗೆ ಶುಭಾ ಬಹಳ ಸಣ್ಣ ಮಟ್ಟದಲ್ಲಿ ಪ್ರಾರಂಭವಾಗಿದೆ. ನನ್ನ ಮನೆಯ ಸಮೀಪದವರಿಗೆ ಆಹಾರ ಕಿಟ್ ವಿತರಿಸಿದ್ದೇನೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಜನರನ್ನು ತಲುಪಿಸುವ ಪ್ರಯತ್ನ ಮಾಡುತ್ತೇನೆ. ದಯವಿಟ್ಟು ನಿಮ್ಮ ಪ್ರದೇಶದ ಜನರಿಗೆ ಸಹಾಯ ಮಾಡಿ. ಪ್ರಾಣಿಗಳಿಗೂ ಆಹಾರ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ನಟಿ ಶುಭಾ ಪೂಂಜಾ ಒಳ್ಳೆ ಕೆಲಸಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.