ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಕವಿರತ್ನ ಕಾಳಿದಾಸ, ಅಂಜದ ಗಂಡು, ಕಿಂದರಿ ಜೋಗಿಯಂತಹ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ನಿರ್ದೇಶಕ ರೇಣುಕಾ ಶರ್ಮಾ ಕೊರೊನಾಗೆ ಬಲಿಯಾಗಿದ್ದಾರೆ.
ಅಂಜದ ಗಂಡು, ಕವಿರತ್ನ ಕಾಳಿದಾಸ ಚಿತ್ರದ ನಿರ್ದೇಶಕ ರೇಣುಕಾ ಶರ್ಮಾ ಕೋವಿಡ್ಗೆ ಬಲಿ - ನಿರ್ದೇಶಕ ರೇಣುಕಾ ಶರ್ಮಾ ನಿಧನ
09:08 May 06
ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ನಿರ್ದೇಶಕ ರೇಣುಕಾ ಶರ್ಮಾ ವಿಧಿವಶರಾಗಿದ್ದಾರೆ.
81 ವರ್ಷದ ರೇಣುಕಾ ಶರ್ಮಾ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಗಿರಿನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ್ಯುಮೋನಿಯಾ ಇದ್ದ ಕಾರಣ ಕಳೆದ ರಾತ್ರಿ ವಿಧಿವಶರಾಗಿದ್ದಾರೆ.
1981ರಲ್ಲಿ ಅನುಪಮ ಚಿತ್ರದ ಮೂಲಕ ನಿರ್ದೇಶಕರಾದ ಶರ್ಮಾ, ಕವಿರತ್ನ ಕಾಳಿದಾಸ, ಶಹಬ್ಬಾಸ್ ವಿಕ್ರಮ್, ಸತ್ಕಾರ ಹಾಗೂ ನಮ್ಮ ಊರು ದೇವತೆ, ಅಂಜದ ಗಂಡು, ಕಿಂದರಿ ಜೋಗಿ, ಶಬರಿ ಮಲೆ ಶ್ರೀ ಅಯ್ಯಪ್ಪ, ಭರ್ಜರಿ ಗಂಡು ಹಾಗೂ ಹಠಮಾರಿ ಹೆಣ್ಣು ಕಿಲಾಡಿ ಗಂಡು, ಕೊಲ್ಲೂರು ಶ್ರೀ ಮೂಕಾಂಬಿಕೆ ಸೂಪರ್ ಹಿಟ್ ಸಿನಿಮಾಗಳನ್ನ ನಿರ್ದೇಶನ ಮಾಡಿದ್ದರು.
ಶರ್ಮಾ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇಂದು ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
ಇದನ್ನೂ ಓದಿ:ಕಿಮ್ಸ್ನಲ್ಲಿ ತಾಯಿಗೆ ಬೆಡ್ ಸಿಗದೆ ಶಾಸಕಿ ಕುಸುಮಾವತಿ ಪರದಾಟ: ಸಿದ್ದರಾಮಯ್ಯ ಮುಂದೆ ಕಣ್ಣೀರು