ದಿವಾಕರ್ ಡಿಂಡಿಮ ಆ್ಯಕ್ಷನ್ ಕಟ್ ಹೇಳಿ ನಿರ್ಮಾಣ ಮಾಡಲು ಸಜ್ಜಾಗಿರುವ ಜುಗಲ್ ಬಂದಿ ಸಿನಿಮಾಕ್ಕೆ ಸ್ಯಾಂಡಲ್ವುಡ್ನಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಯಾಗಿದೆ. ಚಿತ್ರ ಆರಂಭವಾಗುವ ಮೊದಲೇ ಇದರ ಆಡಿಯೋ ರೈಟ್ಸ್ ಉತ್ತಮ ಮೊತ್ತಕ್ಕೆ ಮಾರಾಟ ಆಗಿರೋದು ಚಿತ್ರತಂಡಕ್ಕೆ ಸಂತಸ ತಂದಿದೆ.
ಆಡಿಯೋ ರೈಟ್ಸ್ ಸೇಲ್ ಆದ ಖುಷಿಯಲ್ಲಿರುವ ಚಿತ್ರತಂಡ ಇಂದು ಶುಭ ಘಳಿಗೆಯಲ್ಲಿ ಅದ್ಧೂರಿಯಾಗಿ ಮುಹೂರ್ತ ನೆರವೇರಿಸಿದೆ. ಬೆಂಗಳೂರಿನ ವರಸಿದ್ದಿ ವಿನಾಯಕ ದೇಗುಲದಲ್ಲಿ ನಡೆದ ಸಿನಿಮಾ ಮುಹೂರ್ತ ಕಾರ್ಯಕ್ರಮದಲ್ಲಿ ನಾಯಕ ಯಶ್ ಶೆಟ್ಟಿ, ಸಂತೋಷ್ ಅಶ್ರಯ್, ಅಶ್ವಿನ್ ರಾವ್ ಪಲ್ಲಕ್ಕಿ, ಅರ್ಚನಾ ಕೊಟ್ಟಿಗೆ ಮಾನಸಿ ಸುಧೀರ್, ನಿರ್ದೇಶಕ ದಿವಾಕರ್ ಡಿಂಡಿಮ ಮುಂತಾದವರು ಭಾಗಿಯಾಗಿದ್ದರು.