ಮೆಗಾಸ್ಟಾರ್ ಚಿರಂಜೀವಿ ಹಾಗೂ ಕಿಚ್ಚ ಸುದೀಪ್ ಪ್ರಮುಖ ಪಾತ್ರದಲ್ಲಿ ನಟಿಸಿರುವ 'ಸೈರಾ ನರಸಿಂಹ ರೆಡ್ಡಿ' ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಈ ಸಿನಿಮಾ ಬಿಡುಗಡೆಗೆ ವಿಘ್ನ ಎದುರಾಗಿದೆ.
ರಾಜ್ಯದಲ್ಲಿ 'ಸೈರಾ ನರಸಿಂಹ ರೆಡ್ಡಿ' ಕನ್ನಡ ಬಿಟ್ಟು ಬೇರೆ ಭಾಷೆಗಳಲ್ಲಿ ಬಿಡುಗಡೆಯಾದರೆ ಉಗ್ರ ಹೋರಾಟದ ಎಚ್ಚರಿಕೆ
ಕರ್ನಾಟಕದಲ್ಲಿ ಕನ್ನಡ ಅವತರಣಿಕೆ ಬಿಟ್ಟು ಬೇರೆ ಭಾಷೆಗಳಲ್ಲಿ 'ಸೈರಾ ನರಸಿಂಹ ರೆಡ್ಡಿ' ಬಿಡುಗಡೆ ಮಾಡಿದರೆ ಉಗ್ರ ಹೋರಾಟ ಕೈಗೊಳ್ಳುವುದಾಗಿ ಕಲನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಚಳವಳಿ ನಾಗೇಶ್ ಎಚ್ಚರಿಸಿದ್ದಾರೆ.
ಈ ಸಿನಿಮಾ ತೆಲುಗು, ಕನ್ನಡ, ಮಲಯಾಳಂ, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತಯಾರಾಗಿದೆ. ಚಿತ್ರವನ್ನು ಕರ್ನಾಟಕದಲ್ಲಿ ಹೆಚ್ಚು ಪರದೆಗಳಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಸುಮಾರು 800 ಸ್ಕ್ರೀನ್ಗಳಲ್ಲಿ ತೆಲುಗಿನ ಸೈರಾ ಚಿತ್ರವನ್ನು ರಿಲೀಸ್ ಮಾಡಲಾಗುತ್ತಿದೆ. ಒಂದು ವೇಳೆ ಹಾಗೆ ಆದಲ್ಲಿ ಉಗ್ರ ಹೋರಾಟ ಮಾಡುತ್ತೇವೆ. ಕರ್ನಾಟಕದಲ್ಲಿ ಈ ಚಿತ್ರದ ಕನ್ನಡ ಅವತರಣಿಕೆ ಬಿಟ್ಟು ಬೇರೆ ಭಾಷೆಯ ಅವತರಣಿಗೆ ಬಿಡುಗಡೆಯಾಗಬಾರದು ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಚಳವಳಿ ನಾಗೇಶ್ ಎಚ್ಚರಿಸಿದ್ದಾರೆ. 'ಸೈರಾ ನರಸಿಂಹ ರೆಡ್ಡಿ' ಚಿತ್ರವನ್ನು ಕರ್ನಾಟಕದಲ್ಲಿ ಧೀರಜ್ ಫಿಲಮ್ಸ್ ವಿತರಣೆ ಮಾಡುತ್ತಿದೆ. ಸುದೀಪ್ ಕೂಡಾ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ಕಿಚ್ಚನ ಅಭಿಮಾನಿಗಳು ಸಿನಿಮಾ ನೋಡಲು ಕಾತರರಾಗಿದ್ದಾರೆ.