ರಾಜತಂತ್ರ ಸಿನಿಮಾ ರಾಘವೇಂದ್ರ ರಾಜ್ ಕುಮಾರ್ ವಿಭಿನ್ನ ಪಾತ್ರದಲ್ಲಿ ಅಭಿನಯಿಸುತ್ತಿರೋ ಚಿತ್ರ. ಸದ್ಯ ಟ್ರೈಲರ್ನಿಂದ ಗಮನ ಸೆಳೆಯುತ್ತಿರೋ ರಾಜತಂತ್ರಕ್ಕೆ ಪಿ.ವಿ.ಆರ್ ಸ್ವಾಮಿ ನಿರ್ದೇಶನವಿರುವ ಈ ಚಿತ್ರಕ್ಕೆ ಸ್ಯಾಂಡಲ್ ವುಡ್ ಕೆಲ ಸ್ಟಾರ್ ನಟರು ಸಪೋರ್ಟ್ ಮಾಡುತ್ತಿದ್ದಾರೆ.
ಹೊಸ ವರ್ಷ ಜನವರಿ 1ಕ್ಕೆ ರಾಜ್ಯಾದ್ಯಂತ 80ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಾಜತಂತ್ರ ಸಿನಿಮಾ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ನಟರಾದ ಶಿವರಾಜ್ ಕುಮಾರ್, ಪುನೀತ್ ರಾಜ್‍ಕುಮಾರ್, ಧ್ರುವ ಸರ್ಜಾ, ವಿನಯ್ ರಾಜ್ ಕುಮಾರ್, ರಿಷಿ, ನಿರ್ದೇಶಕ ಎ.ಪಿ ಅರ್ಜುನ್ ಸೇರಿದಂತೆ ಸಾಕಷ್ಟು ತಾರೆಯರು ಈ ಸಿನಿಮಾದ ವಿಶೇಷತೆ ಬಗ್ಗೆ ಹೇಳುವ ಮೂಲಕ ಕೊರೊನಾ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಚಿತ್ರಮಂದಿರಗಳಲ್ಲಿ ಸಿನಿಮಾ ನೋಡಿ ಅಂತಾ ಎಲ್ಲ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
'ರಾಜತಂತ್ರ' ಚಿತ್ರದ ಬೆನ್ನಿಗೆ ನಿಂತ ಶಿವಣ್ಣ, ಪುನೀತ್, ಧ್ರುವ ಸರ್ಜಾ! ದೊಡ್ಮನೆ ಮಗ ಶಿವರಾಜ್ ಕುಮಾರ್ ಮೊದಲು ಹೊಸ ವರ್ಷಕ್ಕೆ ಶುಭಾಶಯ ಹೇಳುವ ಮೂಲಕ ಸಹೋದರ ಸಿನಿಮಾ ನೋಡಿ ಅಂತಾ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ಇದೇ ಮೊದಲ ಬಾರಿಗೆ ನಿವೃತ್ತ ಯೋಧನ ಪಾತ್ರ ಮಾಡಿದ್ದಾರೆ. ರಾಘಣ್ಣ ಅಲ್ಲದೇ ದೊಡ್ಡಣ್ಣ, ಶ್ರೀನಿವಾಸ ಮೂರ್ತಿ, ಭವ್ಯ, ರಂಜನ್ ಹಾಸನ್, ಶಂಕರ್ ಅಶ್ವಥ್, ನೀನಾಸಂ ಅಶ್ವಥ್, ಮುನಿರಾಜು, ವಿಜಯಭಾಸ್ಕರ್, ಪ್ರತಾಪ್ ಸಿಂಹ ಅಗರ, ಶಿವಾನಂದ, ಪ್ರಕಾಶ್ ಕಾರಿಯಪ್ಪ ನಟಿಸಿದ್ದಾರೆ.
ಈ ಚಿತ್ರವನ್ನ ಪಿ.ವಿ.ಆರ್ ಸ್ವಾಮಿ ನಿರ್ದೇಶನ ಮಾಡಿದ್ದಾರೆ. ಶ್ರೀಸುರೇಶ್ ಸಂಗೀತ ನಿರ್ದೇಶನ, ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ, ನಾಗೇಶ್ ಸಂಕಲನ, ಚಂದನ್ ಕಲಾ ನಿರ್ದೇಶನ ಹಾಗೂ ವೈಲೆಂಟ್ ವೇಲು, ರಾಮ್ ದೇವ್, ಅಲ್ಟಿಮೇಟ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.ವಿಶ್ವಂ ಡಿಜಿಟಲ್ ಮೀಡಿಯಾ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣ ಆಗಿದೆ.