ತುಮಕೂರು:ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದ ವೇಳೆ ಟ್ವಿಟರ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ವಿರುದ್ಧ ಇದೀಗ ಪ್ರಕರಣ ದಾಖಲು ಮಾಡುವಂತೆ ಪೊಲೀಸರಿಗೆ ತುಮಕೂರು ಕೋರ್ಟ್ ಆದೇಶ ನೀಡಿದೆ.
ಪ್ರಕರಣ ದಾಖಲು ಮಾಡುವಂತೆ ವಕೀಲ ಎಲ್. ರಮೇಶ್ ನಾಯ್ಕ್ ಜೆಎಂಎಫ್ಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ತುಮಕೂರು ನಗರದ ಕ್ಯಾತ್ಸಂದ್ರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ಗೆ ಪ್ರಕರಣ ದಾಖಲು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಸೆಕ್ಷನ್ 156(3) ರ ಅಡಿ ದೂರು ದಾಖಲು ಮಾಡಿಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದೆ. ಸೆಪ್ಟೆಂಬರ್ 21ರಂದು ನಟಿ ಕಂಗನಾ ರಣಾವತ್ ತಮ್ಮ ಟ್ವಿಟರ್ ಖಾತೆಯಲ್ಲಿ ಕೃಷಿ ಮಸೂದೆ ಪ್ರತಿಭಟನೆ ವಿರೋಧವಾಗಿ ಟ್ವೀಟ್ ಮಾಡಿದ್ದರು.
ಏನಿದು ಪ್ರಕರಣ?