ಬೆಂಗಳೂರು: ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ನಟ ಶಿವರಾಜ್ಕುಮಾರ್ ಅವರ ನೇತೃತ್ವದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಮಹತ್ವದ ಸಭೆ ನಡೆಸಿದರು. ಬುಧವಾರ (ಜುಲೈ 29) ಚಿತ್ರರಂಗದ ನಟರೊಂದಿಗೆ ಶಿವಣ್ಣ ಸಭೆ ನಡೆಸಿದ್ದರು.
ನಟ ಶಿವರಾಜ್ಕುಮಾರ್ ನೇತೃತ್ವದಲ್ಲಿ ಸಭೆ ಮಂಡಳಿಯ ಅಧ್ಯಕ್ಷ ಗುಬ್ಬಿ ಜಯರಾಜ್, ಉಪಾಧ್ಯಕ್ಷ ಉಮೇಶ್ ಬಣಕಾರ್, ಗೌರವ ಕಾರ್ಯದರ್ಶಿ ಎನ್.ಎಂ.ಸುರೇಶ್, ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು, ನಾಗಣ್ಣ, ನಿರ್ಮಾಪಕ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹಾಗೂ ನಿರ್ಮಾಪಕರಾದ ಜಯಣ್ಣ, ಕೆ.ಪಿ.ಶ್ರೀಕಾಂತ್, ಭಾ.ಮಾ.ಹರೀಶ್, ಮಾಜಿ ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ.ಗೋವಿಂದ್ ಸೇರಿದಂತೆ ಫಿಲ್ಮ್ ಚೇಂಬರ್ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಭಾಗವಹಿಸಿದ್ದ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಕೊರೊನಾದಿಂದ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳು, ಸರ್ಕಾರ ಮತ್ತು ಕನ್ನಡ ಚಿತ್ರೋದ್ಯಮದ ಸಮನ್ವಯ, ಸರ್ಕಾರದಿಂದ ಚಿತ್ರೋದ್ಯಮಕ್ಕೆ ನೆರವಿನ ಹಸ್ತ, ಚಿತ್ರಮಂದಿರಗಳ ಆರಂಭ ಹಾಗೂ ಚಿತ್ರೀಕರಣ...ಹೀಗೆ ಹತ್ತು ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಹತ್ವದ ಸಭೆ ಶಿವರಾಜ್ಕುಮಾರ್ ನೇತೃತ್ವದಲ್ಲಿ ಮಂಗಳವಾರ (ಆಗಸ್ಟ್ 4) ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದೇವೆ. ಲಾಕ್ಡೌನ್ನಿಂದಾಗಿ ಕನ್ನಡ ಚಿತ್ರೋದ್ಯಮ ಎದುರಿಸುತ್ತಿರುವ ಸಮಸ್ಯೆಗಳನ್ನು ಸಿಎಂ ಗಮನಕ್ಕೆ ತರಲಾಗುತ್ತದೆ. ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ಸಹಾಯ ಹಸ್ತ ನೀಡುವಂತೆ ಕೇಳಲಿದ್ದೇವೆ. ಜೊತೆಗೆ ಫಿಲ್ಮ್ ಸಿಟಿ ನಿರ್ಮಿಸುವ ಕುರಿತು ಚರ್ಚೆ ಕೂಡ ಮಾಡಲಾಗುತ್ತದೆ ಎಂದು ಉಮೇಶ್ ಬಣಕಾರ್ ತಿಳಿಸಿದ್ದಾರೆ.
ಸಭೆಯ ನಂತರ ಕ್ಯಾಮೆರಾಗೆ ಫೋಸ್ ನೀಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು