ಮದುವೆಯ ನಂತರವೂ ಬಾಲಿವುಡ್ ನಟಿ ಕತ್ರಿನಾ ಕೈಫ್ ಸಿನಿಮಾ ಶೂಟಿಂಗ್ನಲ್ಲಿ ಫುಲ್ ಬ್ಯೂಸಿಯಾಗಿದ್ದಾರೆ. ಇಂದು ತಮ್ಮ ಮುಂಬರುವ ಚಿತ್ರ 'ಮೆರ್ರಿ ಕ್ರಿಸ್ಮಸ್' ಚಿತ್ರೀಕರಣವನ್ನು ಪ್ರಾರಂಭಿಸಿದ್ದು, ಈ ಕುರಿತಾದ ಪೋಸ್ಟ್ವೊಂದನ್ನ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ಡಿಸೆಂಬರ್ 2021ರಲ್ಲಿ ನಿರ್ದೇಶಕ ಶ್ರೀರಾಮ್ ರಾಘವನ್ ಮತ್ತು ನಿರ್ಮಾಪಕ ರಮೇಶ್ ತೌರಾನಿ ಇನ್ಸ್ಟಾಗ್ರಾಮ್ನಲ್ಲಿ ಫೋಟೋವನ್ನು ಶೇರ್ ಮಾಡುವ ಮೂಲಕ 'ಮೆರ್ರಿ ಕ್ರಿಸ್ಮಸ್' ಸಿನಿಮಾ ಮಾಡುತ್ತಿರುವ ಬಗ್ಗೆ ಅಧಿಕೃತವಾಗಿ ದೃಢಪಡಿಸಿದ್ದರು. ಇದಾದ ಒಂದು ತಿಂಗಳ ನಂತರ ಕತ್ರಿನಾ ಚಿತ್ರತಂಡದ ಜೊತೆಗಿರುವ ಫೋಟೋವನ್ನು ಹಂಚಿಕೊಂಡು 'ಹೊಸ ಪ್ರಾರಂಭ' ಎಂಬ ಶೀರ್ಷಿಕೆ ನೀಡಿದ್ದರು.
ಇಂದು ಮತ್ತೊಂದು ಪೋಸ್ಟ್ ಮಾಡಿರುವ ನಟಿ, 'ಮೆರ್ರಿ ಕ್ರಿಸ್ಮಸ್' ಸಿನಿಮಾದ ಶೂಟಿಂಗ್ ಇಂದಿನಿಂದ ಪ್ರಾರಂಭಿಸಲಾಗಿದೆ ಎಂಬ ಮಾಹಿತಿ ನೀಡಿ, ನಾನು ಯಾವಾಗಲೂ ಶ್ರೀರಾಮ್ ಸರ್ ಅವರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ. ಥ್ರಿಲ್ಲರ್ ಮತ್ತು ಹಾರರ್ ದೃಶ್ಯಗಳನ್ನ ಅತ್ಯುತ್ತಮವಾಗಿ ಸೆರೆ ಹಿಡಿಯುತ್ತಾರೆ. ನಟ ವಿಜಯ್ ಸೇತುಪತಿ ಅವರೊಂದಿಗೆ ಕೆಲಸ ಮಾಡಲು ತುಂಬಾ ಉತ್ಸುಕನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಕತ್ರಿನಾ ಕೈಫ್ ಮತ್ತು ಸಲ್ಮಾನ್ ಖಾನ್ ನಟನೆಯ 'ಟೈಗರ್ 3' ಸಿನಿಮಾ ಏಪ್ರಿಲ್ 21ಕ್ಕೆ ಈದ್ ಹಬ್ಬದ ಸಂದರ್ಭದಲ್ಲಿ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದ್ದು, ಈ ಬೆನ್ನಲ್ಲೇ ನಟಿ ಮತ್ತೊಂದು ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿರುವುದಕ್ಕೆ ಅಭಿಮಾನಿಗಳು ಶುಭ ಕೋರಿದ್ದಾರೆ.
ಇದನ್ನೂ ಓದಿ:ಪ್ರೇಯಸಿ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟರ್ ರಾಹುಲ್ ಚಾಹರ್!