ಕರ್ನಾಟಕ

karnataka

ETV Bharat / sitara

Watch... ರಾಜಸ್ಥಾನದಲ್ಲಿ ನಡೆಯಲಿದೆ ಕತ್ರಿನಾ ಕೈಫ್ -ವಿಕ್ಕಿ ಕೌಶಲ್ ಅದ್ಧೂರಿ ವಿವಾಹ.. - ಕತ್ರಿನಾ ಕೈಫ್ ಮದುವೆ

ಬಾಲಿವುಡ್ ತಾರೆಯರಾದ ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ (Vicky Kaushal) ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯ ಸಿಕ್ಸ್ ಸೆನ್ಸ್ ಫೋರ್ಟ್ ಹೋಟೆಲ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧತೆ ನಡೆಸಿದ್ದಾರೆ.

ಕತ್ರಿನಾ ಕೈಫ್ -ವಿಕ್ಕಿ ಕೌಶಲ್  ವಿವಾಹಕ್ಕೆ  ಸಿದ್ಧತೆ
ಕತ್ರಿನಾ ಕೈಫ್ -ವಿಕ್ಕಿ ಕೌಶಲ್ ವಿವಾಹಕ್ಕೆ ಸಿದ್ಧತೆ

By

Published : Nov 13, 2021, 7:34 AM IST

ಬಾಲಿವುಡ್ ನಟಿ ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ (Vicky Kaushal) ಅವರ ಮದುವೆ ಸಿದ್ಧತೆ ಕಾರ್ಯ ಭರದಿಂದ ಸಾಗುತ್ತಿದೆ.

ವಿಕ್ಕಿ ಕೌಶಲ್ ಹಾಗೂ ನಟಿ ಕತ್ರಿನಾ ಕೈಫ್ ನಡುವೆ ಪ್ರೇಮಾಂಕುರವಾಗಿದ್ದು, ಸದ್ಯದಲ್ಲೇ ವಿವಾಹವಾಗಲಿದ್ದಾರೆ. ಈ ಹಿನ್ನೆಲೆ ರಾಜಸ್ಥಾನದ ಸವಾಯಿ ಮಾಧೋಪುರ್ ಜಿಲ್ಲೆಯ ಸಿಕ್ಸ್ ಸೆನ್ಸ್ ಫೋರ್ಟ್ ಹೋಟೆಲ್‌ನಲ್ಲಿ (Six Senses Fort Hotel) ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕತ್ರಿನಾ ಕೈಫ್ -ವಿಕ್ಕಿ ಕೌಶಲ್ ವಿವಾಹಕ್ಕೆ ಸಿದ್ಧತೆ

ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಇಬ್ಬರೂ ಉತ್ತಮ ಕಲಾವಿದರು. ವಿಕ್ಕಿ ಕೌಶಲ್ ಅಭಿನಯದ ಇತ್ತೀಚೆಗಷ್ಟೇ ಬಿಡುಗಡೆಯಾದ 'ಸರ್ದಾರ್ ಉದಾಮ್' ( Sardar Udham) ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅದೇ ಸಮಯದಲ್ಲಿ ಕತ್ರಿನಾ ಕೈಫ್ ಅಭಿನಯದ 'ಸೂರ್ಯವಂಶಿ' (Sooryavanshi) ಚಿತ್ರವೂ ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಸದ್ದು ಮಾಡುತ್ತಿದೆ.

ABOUT THE AUTHOR

...view details