ಕೆಜಿಎಫ್ ಚಾಪ್ಟರ್ 1 ಬಿಗ್ ಹಿಟ್ ನಂತ್ರ ಕೆಜಿಎಫ್ ಚಾಪ್ಟರ್2 ಸಿನಿಮಾದ ಮೇಲೆ ಅಭಿಮಾನಿಗಳಿಗೆ ಕುತೂಹಲ ಹೆಚ್ಚಿದೆ. ಅದ್ರಲ್ಲೂ ಇತ್ತೀಚೆಗೆ ಬಿಡುಗಡೆಯಾಗಿರುವ ಪೋಸ್ಟರ್ನಲ್ಲಿ ರಾಕಿಂಗ್ ಸ್ಟಾರ್ ಲುಕ್ ಖಡಕ್ ಆಗಿದ್ದು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.
ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಇದ್ರ ನಡುವೆ ಶೂಟಿಂಗ್ನ ಕೆಲವು ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ರಾಕಿಭಾಯ್ ನ್ಯೂ ಲುಕ್ ಇದೀಗ ಬಹಿರಂಗವಾಗಿದೆ.