ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಕಳೆದ 28 ದಿನಗಳಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಇಂದು ಮನೆಗೆ ಮರಳಿದ್ದಾರೆ.
ಆಸ್ಪತ್ರೆಯಿಂದ ಮನೆಗೆ ಮರಳಿದ ಭಾರತದ ಗಾನ ಕೋಗಿಲೆ.. - ಗಾನ ಕೋಗಿಲೆ ಲತಾ ಮಂಗೇಶ್ಕರ್
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಲತಾ ದೀದಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಗಾನಕೋಗಿಲೆ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ತಮ್ಮ ನಿವಾಸಕ್ಕೆ ಮರಳಿದ್ದಾರೆ.
![ಆಸ್ಪತ್ರೆಯಿಂದ ಮನೆಗೆ ಮರಳಿದ ಭಾರತದ ಗಾನ ಕೋಗಿಲೆ.. lata mangeshkar returns home](https://etvbharatimages.akamaized.net/etvbharat/prod-images/768-512-5310518-thumbnail-3x2-giri.jpg)
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಲತಾ ದೀದಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಗಾನಕೋಗಿಲೆ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ತಮ್ಮ ನಿವಾಸಕ್ಕೆ ಮರಳಿದ್ದಾರೆ.
ಈ ಬಗ್ಗೆ ಸ್ವತಃ ಲತಾ ಮಂಗೇಶ್ಕರ್ ಟ್ವೀಟ್ ಮಾಡಿದ್ದು, ನನಗೆ ಉಸಿರಾಟದ ತೊಂದರೆ ಇದ್ದ ಹಿನ್ನೆಲೆಯಲ್ಲಿ ಕಳೆದ 28 ದಿನಗಳಿಂದ ಬೀಚ್ ಕ್ಯಾಂಡಿ ಆಸ್ಪತ್ರಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ. ಚಿಕಿತ್ಸೆ ವೇಳೆ ಪ್ರೀತಿಯಿಂದ ನನ್ನನ್ನು ನೋಡಿಕೊಂಡ ವೈದ್ಯರಿಗೆ ಹಾಗೂ ನನ್ನ ಹಿತ ಬಯಸಿದ ನನ್ನೆಲ್ಲ ಅಭಿಮಾನಿಗಳಿಗೆ ಧನ್ಯವಾದಗಳು ಎಂದು ಟ್ವೀಟ್ನಲ್ಲಿ ಬರೆದಿದ್ದಾರೆ.