ಸ್ಯಾಂಡಲ್ವುಡ್ನ ಬ್ಯುಸಿಯೆಸ್ಟ್ ನಟಿಯರಲ್ಲಿ ಒಬ್ಬರಾಗಿರುವ ಆಶಿಕಾ ರಂಗನಾಥ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕ್ರೇಜಿ ಬಾಯ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶಿಕಾ ರಂಗನಾಥ್, ಹಲವು ಬಗೆಯ ಚಿತ್ರಗಳಲ್ಲಿ ನಟಿಸುವ ಮೂಲಕ ಸ್ಯಾಂಡಲ್ವುಡ್ನಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ.
ಮುಗುಳುನಗೆ, ರಾಜು ಕನ್ನಡ ಮೀಡಿಯಂ, ತಾಯಿಗೆ ತಕ್ಕ ಮಗ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಆಶಿಕಾ, ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿಯಾಗಿ ಬೆಳೆಯುತ್ತಿದ್ದಾರೆ.
ಪ್ರಸ್ತುತ ಅವತಾರ ಪುರುಷ, ರೇಮೋ, ರಂಗಮಂದಿರ, ಮದಗಜ ಸೇರಿದಂತೆ ನಾಲ್ಕೈದು ಸಿನಿಮಾಗಳಲ್ಲಿ ಆಶಿಕಾ ರಂಗನಾಥ್ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಚಿತ್ರದ, ಐಟಂ ಸಾಂಗ್ನಲ್ಲಿಯೂ ಹಾಟ್ ಹಾಟ್ ಆಗಿ ಆಶಿಕಾ ಕಾಣಿಸಿಕೊಂಡಿದ್ದಾರೆ.