ಕರ್ನಾಟಕ

karnataka

ETV Bharat / sitara

ಮಂಡ್ಯ ಸಂಸದೆ ಸುಮಲತಾಗೆ ಕೈ ಮುಗಿದು ಗೌರವ ಸೂಚಿಸಿದ ಮೋದಿ - undefined

ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿದ್ದಾರೆ. ನಿನ್ನೆ ಕೇಂದ್ರ ಜಲಶಕ್ತಿ ಸಚಿವರ ಜೊತೆ ಮಾತುಕತೆ ನಡೆಸಿದ ಅವರು, ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.

ಚಿತ್ರಕೃಪೆ : ಟ್ವಿಟರ್​

By

Published : Jun 21, 2019, 9:01 PM IST

ಬೆಂಗಳೂರು:ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್​ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ.

ನವದೆಹಲಿಯಲ್ಲಿಂದು ಈ ಔಪಚಾರಿಕ ಭೇಟಿ ನಡೆಯಿತು. ಪ್ರಧಾನಿ ಮೋದಿ, ಸುಮಲತಾರಿಗೆ ಕೈ ಮುಗಿದು ಗೌರವ ಸೂಚಿಸಿದ್ದಾರೆ. ಇದೇ ವೇಳೆ ಸುಮಲತಾ ಕೂಡಾ ಎರಡು ಕೈ ಜೋಡಿಸಿ ಪ್ರತಿಗೌರವ ಸೂಚಿಸಿದ್ದಾರೆ. ಈ ವೇಳೆ ಕಲಬುರಗಿ ಬಿಜೆಪಿ ಸಂಸದ ಉಮೇಶ್ ಜಾಧವ್ ಕೂಡ ಹಾಜರಿದ್ದರು. ಈ ಪೋಟೋಗಳನ್ನು ಸುಮಲತಾ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ನಿನ್ನೆಯಷ್ಟೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ್ದ ಸುಮಲತಾ, ಮಂಡ್ಯ ರೈತರ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದು, ಅವುಗಳ ಪರಿಹಾರಕ್ಕೆ ಮನವಿ ಸಲ್ಲಿಸಿದ್ದರು.

For All Latest Updates

TAGGED:

ABOUT THE AUTHOR

...view details