ಕರ್ನಾಟಕ

karnataka

ETV Bharat / sitara

ನಿಂತು ಹೋಯಿತೇ ಜೀವ ಗಾನ.. 'ಮೇಲೊಬ್ಬ ಮಾಯಾವಿ' ಹಾಡನ್ನ ಸಂಚಾರಿ ವಿಜಯ್​ಗೆ ಅರ್ಪಿಸಿದ ನಿರ್ದೇಶಕ - sanchari vijay latest news 2021

ಊಟವನ್ನು ಇಷ್ಟಪಡುವ ನೀವು, ಸಾಕಷ್ಟು ಬಾರಿ ಕೈತುತ್ತು ಕೊಟ್ರಿ. ನಿಮ್ಮ ನಟನೆಯ ಸ್ಕಿಲ್​ನ್ನು ಯಾವುದೇ ಆಮಿಷವಿಲ್ಲದೇ ಹಂಚಿದಿರಿ. ಇವತ್ತು ರಿಲೀಸ್ ಆಗಿರುವ ವಿಡಿಯೋ ಸಾಂಗ್ ಅನ್ನು ಅವಾಗವಾಗ ʻʻಡೈರೆಕ್ಟ್ರೆ ಬೇಗ ರಿಲೀಸ್ ಮಾಡಿ ಅಂದ್ರಿʼʼ. ಈ ಸಮಯದಲ್ಲಿ ರಿಲೀಸ್ ಮಾಡುವ ಮನಸ್ಥಿತಿ ನಮ್ಮದಲ್ಲ. ಇಡೀ ತಂಡ ದಿಗ್ಭ್ರಮೆಯಲ್ಲಿದೆ ಎಂದು ನಿರ್ದೇಶಕ ನವೀನ್ ಕೃಷ್ಣ ತಿಳಿಸಿದ್ದಾರೆ.

sanchari-vijay
ಸಂಚಾರಿ ವಿಜಯ್

By

Published : Jun 17, 2021, 8:21 PM IST

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಇಹಲೋಕ ತ್ಯಜಿಸಿರೋ ನಟ ಸಂಚಾರಿ ವಿಜಯ್ ಅವರ ಕೆಲಸ ಹಾಗೂ ಸಿನಿಮಾಗಳು ಇನ್ನು ನೆನಪು ಮಾತ್ರ‌. ಟೈಟಲ್​ನಿಂದಲೇ ಸ್ಯಾಂಡಲ್​ವುಡ್​ನಲ್ಲಿ ಸದ್ದು ಮಾಡ್ತಿರೋ 'ಮೇಲೊಬ್ಬ ಮಾಯಾವಿ' ಚಿತ್ರದ ಹಾಡೊಂದನ್ನು ನಿರ್ದೇಶಕ ನವೀನ್ ಕೃಷ್ಣ ಬಿಡುಗಡೆ ಮಾಡುವ ಮೂಲಕ, ಸಂಚಾರಿ ವಿಜಯ್ ಜೊತೆಗಿನ ಒಡನಾಟ ಹಂಚಿಕೊಂಡಿದ್ದಾರೆ.

ವಿಜಿ ಸಾರ್, ಮೇಲೊಬ್ಬ ಮಾಯಾವಿ ಚಿತ್ರ, ನನ್ನ ನಿಮ್ಮ ಜೊತೆಯಾಗಿಸಿತು. ಒಂದೇ ಸಿನಿಮಾದ ಒಡನಾಟದಲ್ಲಿ ಒಡಹುಟ್ಟಿದವರಿಗಿಂತ ಹತ್ತಿರವಾದ್ರಿ. ಯಾರಲ್ಲೂ ಹಂಚಿಕೊಳ್ಳಲಾಗದ, ಹಂಚಿಕೊಳ್ಳಬಾರದ ಸಂಕಟಗಳನ್ನು ಮಗುವಿನಂತೆ ಹಂಚಿಕೊಂಡ್ರಿ. ನಾನೊಬ್ಬ ಡೈರೆಕ್ಟರ್, ನೀವೊಬ್ಬ ಆಕ್ಟರ್ ಅನ್ನುವ ಕೊಂಡಿಯನ್ನು ಬಹುಬೇಗ ಕಳಚಿದ್ರಿ. ಸದಾ ಹೊಸತನ್ನು ಯೋಚಿಸುವ, ಸದಾ ಸಂತೋಷವನ್ನು ಹಂಚುವ, ಎಲ್ಲರಿಗೂ ಒಳ್ಳೆಯದನ್ನು ಬಯಸುವ ನಿಮ್ಮ ಜೀವನ ಸೂತ್ರವನ್ನು ಇಡೀ ತಂಡಕ್ಕೆ ಉಚಿತವಾಗಿ ಹಂಚಿದಿರಿ.

ಊಟವನ್ನು ಇಷ್ಟಪಡುವ ನೀವು, ಸಾಕಷ್ಟು ಬಾರಿ ಕೈತುತ್ತು ಕೊಟ್ರಿ. ನಿಮ್ಮ ನಟನೆಯ ಸ್ಕಿಲ್​ನ್ನು ಯಾವುದೇ ಆಮಿಷವಿಲ್ಲದೇ ಹಂಚಿದಿರಿ. ಇವತ್ತು ರಿಲೀಸ್ ಆಗಿರುವ ವಿಡಿಯೋ ಸಾಂಗ್ ಅನ್ನು ಅವಾಗವಾಗ ʻʻಡೈರೆಕ್ಟ್ರೆ ಬೇಗ ರಿಲೀಸ್ ಮಾಡಿ ಅಂದ್ರಿʼʼ. ಈ ಸಮಯದಲ್ಲಿ ರಿಲೀಸ್ ಮಾಡುವ ಮನಸ್ಥಿತಿ ನಮ್ಮದಲ್ಲ. ಇಡೀ ತಂಡ ದಿಗ್ಭ್ರಮೆಯಲ್ಲಿದೆ. ಆದರೂ ರಿಲೀಸ್ ಮಾಡಿರೋದು ನಮ್ಮ ತಂಡದ ಜೊತೆ ನೀವೂ ಕೂತು ನೋಡ್ತಿದ್ದೀರಿ ಅನ್ನೋ ಉದ್ದೇಶಕ್ಕೆ ʻʻವಿಜಿ ಸರ್, ಗುಂಡಿ ತೋಡಿ ಹೂಳುವ ಸೀಕ್ವೆನ್ಸ್ ಮಾಡ್ತೀರಾ, ಒಪ್ಪಿಗೇನಾ?ʼʼ ಅಂದಿದ್ದಕ್ಕೆ, ʻʻಒಂದಲ್ಲಾ ಒಂದಿನಾ ಮಲ್ಕೋಬೇಕಲ್ಲಾʼʼ ಅಂತ ನಗ್ತಾ ಹೇಳಿದ್ರಿ.

ಆದರೀಗ!! ಸರ್, ಈ ಸಾಂಗ್ ಬಗ್ಗೆ ನಾನು ಚಂದ್ರಣ್ಣ ( ಚಕ್ರವರ್ತಿ ಸರ್) ಸಾಕಷ್ಟು ಡಿಸ್ಕಸ್ ಮಾಡಿದ್ವಿ. ಚಂದ್ರಣ್ಣ ನಾನು ಕೊಟ್ಟ ಇನ್ಪುಟ್ಸ್ ಅನ್ನು ತುಂಬಾ ಸೀರಿಯಸ್ ಆಗಿ ತಗೊಂಡು, ನಿಮ್ಮ ಒಪ್ಪಿಗೆಯನ್ನು ಪಡೆದೇ ಶೂಟ್ ಮಾಡಲಾಯ್ತು. ಬಾಲ್ಯದ ಗೆಳೆಯ, ನಿರ್ಮಾಪಕ ಪುತ್ತೂರು ಭರತ್, ಯಾವುದಕ್ಕೂ ನೋ ಅಂದಿಲ್ಲ. ಎಲ್ಲಾ ರಿಸ್ಕ್​ಗಳನ್ನೂ ತನ್ನ ಹೆಗಲ ಮೇಲೆ ಹೊತ್ತು ನಡೆದ್ರು. ಈ ಕ್ಷಣಕ್ಕೂ ಕೊನೆಯದಾಗಿ ವಿಜಿ ಸರ್ ನಿಮ್ಮ ಫೋಟೋ ಹಾಕಿ ʻರಿಪ್ʼ ಅನ್ನೊಲ್ಲ. ನಮ್ಮ ಇಡೀ ಮಾಯಾವಿ ತಂಡದ ಕೊನೆ ಉಸಿರಿರುವವರೆಗೂ ನಿಮ್ಮ ಮುಗ್ಧ ಮಗುವಿನಂತ ನಗುವಿನ ಜೊತೆಗಿರುತ್ತೆ. ಸರ್, ಬನ್ನಿ ನಾನು ನೀವು ಚಂದ್ರಣ್ಣ ಬೆಸ್ಟ್ ಒಟ್ಟೊಟ್ಟಾಗಿ ಜಗಳ ಮಾಡೋಣ. ಅಟ್ಲೀಸ್ಟ್ ಮೂವರೂ ಒಂದು ಹಗ್ ಮಾಡೋಣ. ʻಮಿಸ್ ಯೂʼ. ಅನ್ನೋಕೂ ಆಗ್ತಿಲ್ಲ ಎಂದು ನಿರ್ದೇಶಕ ಬಿ.ನವೀನ್ ಕೃಷ್ಣ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.

ಓದಿ:ಕ್ರೈಮ್ ಥ್ರಿಲ್ಲರ್ ಸಿನಿಮಾದಲ್ಲಿ ಬಿಗ್​ಬಾಸ್ ವಿನ್ನರ್ ಶೈನ್ ಶೆಟ್ಟಿ

ABOUT THE AUTHOR

...view details