ಬೆಂಗಳೂರು:ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ಗೆ ಇಂದು 47ನೇ ಹುಟ್ಟುಹಬ್ಬದ ಸಂಭ್ರಮ. ಸುದೀಪ್ ಈ ಬಾರಿ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಆದರೂ ಮೆಚ್ಚಿನ ನಟನ ಹುಟ್ಟುಹಬ್ಬವನ್ನು ಅಭಿಮಾನಿಗಳು ತಾವಿರುವ ಸ್ಥಳದಲ್ಲೇ ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ.
ಸುದೀಪ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಚಿವರಾದ ಶ್ರೀರಾಮುಲು, ಡಾ. ಸುಧಾಕರ್ - Sriramulu wished sudeep Birthday
ಸಚಿವರಾದ ಶ್ರೀ ರಾಮುಲು ಹಾಗೂ ಡಾ. ಸುಧಾಕರ್ ಸುದೀಪ್ಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ. ನಿಮ್ಮ ಸಿನಿಮಾ ಜೀವನ ಮತ್ತಷ್ಟು ಎತ್ತರಕ್ಕೆ ಏರಲಿ ಹಾಗೂ ಸಾಮಾಜಿಕ ಸೇವೆ ಇದೇ ರೀತಿ ಮುಂದುವರೆಯಲಿ ಎಂದು ಇಬ್ಬರೂ ಹಾರೈಸಿದ್ದಾರೆ.
ಆರೋಗ್ಯ ಸಚಿವ ಬಿ. ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸುದೀಪ್ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದು ಸೇರಿದಂತೆ ಅನೇಕ ರೀತಿಯ ಸಮಾಜ ಸೇವೆಯಲ್ಲಿ ತೊಡಗಿರುವ ನಿಮ್ಮಿಂದ ಸಮಾಜಕ್ಕೆ ಇನ್ನಷ್ಟು ಸೇವೆ ದೊರೆಯುವಂತಾಗಲಿ. ಹಾಗೆಯೇ ನಿಮ್ಮ ಸಿನಿ ಪಯಣ ಇನ್ನಷ್ಟು ಎತ್ತರಕ್ಕೇರಲಿ. ದೇವರು ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ನೀಡಿ ಆಶೀರ್ವದಿಸಲಿ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹಾರೈಸಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿ, ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ಕಲಾಭಿಮಾನಿಗಳ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕೊಟ್ಟು ಇನ್ನಷ್ಟು ದೀರ್ಘಕಾಲ ಕಲಾಸೇವೆ ಮಾಡುವಂತಾಗಲಿ ಎಂದು ಹಾರೈಸಿದ್ದಾರೆ.