ಸಂಸದೆ ಸುಮಲತಾ ಅಂಬರಿಶ್ ಕೇಂದ್ರ ಸಚಿವರಾದ ಸದಾನಂದ ಗೌಡ ಹಾಗೂ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿ ಮಂಡ್ಯ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಸಲ್ಲಿಸಿದ್ದಾರೆ.
ಮಂಡ್ಯ ರೈತರ ಸಮಸ್ಯೆ ನಿವಾರಣೆಗೆ ಕಾರ್ಯ ಪ್ರವೃತ್ತ... ಕೇಂದ್ರ ಜಲಶಕ್ತಿ ಸಚಿವರಿಗೆ ಸಂಸದೆ ಸುಮಲತಾ ಮನವಿ - undefined
ಮಂಡ್ಯ ಜಿಲ್ಲೆಯ ರೈತರ ಸಮಸ್ಯೆ ಬಗೆಹರಿಸಲು ಮಂಡ್ಯದ ನೂತನ ಸಂಸದೆ ಸುಮಲತಾ ಕಾರ್ಯ ಪ್ರವೃತ್ತರಾಗಿದ್ದಾರೆ. ಇಂದು ಅವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಪ್ರಸ್ತುತ ಮುಂಗಾರು ತಡವಾದ ಹಿನ್ನೆಲೆ ಕಾವೇರಿ ಕೊಳ್ಳಗಳಲ್ಲಿ ನೀರಿನ ಮಟ್ಟ ಕುಸಿದಿದ್ದು ಮಂಡ್ಯ ರೈತರು ಕಂಗಾಲಾಗಿದ್ದಾರೆ. ಜೊತೆಗೆ ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕಾದ ಪರಿಸ್ಥಿತಿ ನಿರ್ಮಾಣವಾದರೆ ರೈತರ ಸಮಸ್ಯೆ ಮತ್ತಷ್ಟು ಬಿಗಡಾಯಿಸುತ್ತದೆ. ಅಲ್ಲದೆ, ಸಾಲಭಾದೆಯಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಪ್ರಮುಖ ಸಮಸ್ಯೆಗಳನ್ನು ಕೇಂದ್ರ ಸಚಿವರ ಗಮನಕ್ಕೆ ತಂದಿರುವ ಅವರು, ಕೇಂದ್ರ ಸರ್ಕಾರ ಮಂಡ್ಯ ರೈತರ ನೆರವಿಗೆ ಬರುವಂತೆ ಮನವಿ ಮಾಡಿದ್ದಾರೆ.
ಇನ್ನು ನಿನ್ನೆಯಷ್ಟೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಜತೆ, ಸುಮಲತಾ ಅಂಬರೀಶ್ ಸೌಜನ್ಯಯುತ ಭೇಟಿ ಮಾಡಿದ್ದರು.