ಕರ್ನಾಟಕ

karnataka

ETV Bharat / sitara

ಸಿಖ್ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ನಟಿ ಕಂಗನಾ ಮುಂಬೈ ನಿವಾಸಕ್ಕೆ ಪೊಲೀಸ್‌ ಭದ್ರತೆ - ನಟಿ ಕಂಗನಾ ಅವರ ಮುಂಬೈ ನಿವಾಸ

ಸಿಖ್‌ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಬಾಲಿವುಡ್‌ ನಟಿ ಕಂಗನಾ ರಣಾವತ್‌ (actress Kangana Ranaut's house) ಅವರ ಮುಂಬೈ ನಿವಾಸದ ಎದುರು ಕೆಲವರು ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಗನಾ (Kangana Ranaut) ಅವರ ನಿವಾಸಕ್ಕೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ.

Mumbai Flash: Big police security outside actress Kangana Ranaut's house
ಸಿಖ್ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ; ನಟಿ ಕಂಗನಾ ಮುಂಬೈ ನಿವಾಸಕ್ಕೆ ಪೊಲೀಸ್‌ ಭದ್ರತೆ

By

Published : Nov 22, 2021, 2:11 PM IST

ಮುಂಬೈ: ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರ ಮುಂಬೈ ನಿವಾಸಕ್ಕೆ (actress Kangana Ranaut's house) ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಸಿಖ್‌ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಂಗನಾ (Kangana Ranaut) ಅವರ ನಿವಾಸದ ಎದುರು ಕೆಲವರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯುವ ಕಾಂಗ್ರೆಸ್‌ ಹಾಗೂ ದೆಹಲಿ ಸಿಖ್‌ ಗುರುದ್ವಾರ ನಿರ್ವಹಣಾ ಸಮಿತಿ ಅಧ್ಯಕ್ಷ ಮಂಜಿಂದರ್‌ ಸಿಂಗ್‌ ಸಿರ್ಸಾ ಕಂಗನಾ ವಿರುದ್ಧ ಎರಡು ಪ್ರತ್ಯೇಕ ದೂರುಗಳನ್ನು ಪೊಲೀಸರಿಗೆ ಸಲ್ಲಿಸಿದ್ದಾರೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ನಟಿ ಕಂಗನಾ ಅವರನ್ನು ಮಾನಸಿಕ ಆಸ್ಪತ್ರೆಗೆ ಕಳುಹಿಸಬೇಕು. ಇಲ್ಲ ಬಂಧಿಸಿ ಜೈಲಿನಲ್ಲಿ ಇಡಬೇಕೆಂದು ಸಿರ್ಸಾ ಟ್ವೀಟ್‌ ಮೂಲಕ ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರದ ಗೃಹ ಸಚಿವರನ್ನು ಭೇಟಿಯಾಗಿ ಸೂಕ್ತ ಕ್ರಮಕ್ಕೆ ಮನವಿ ಮಾಡುವುದಾಗಿ ಮಂಜಿಂದರ್‌ ಸಿಂಗ್‌ ಸಿರ್ಸಾ ಹೇಳಿದ್ದಾರೆ. ಸಿಖ್‌ (Sikh Farmers) ರೈತರ ಹೋರಾಟವನ್ನು ಸಿಖ್‌ ಖಲಿಸ್ತಾನಿ ಚಳವಳಿಗೆ ಪರೋಕ್ಷವಾಗಿ ಹೋಲಿಸಿದ್ದಾರೆ ಎಂಬ ಆರೋಪ ನಟಿ ಕಂಗನಾ ವಿರುದ್ಧ ಕೇಳಿ ಬಂದಿದೆ.

ಇದನ್ನೂ ಓದಿ:'ಇಂದಿರಾಗಾಂಧಿ ಖಲಿಸ್ತಾನಿಗಳನ್ನು ಸೊಳ್ಳೆಗಳಂತೆ ಬಡಿದು ಹಾಕಿದರು': ಕಂಗನಾ ವಿರುದ್ಧ ದೂರು ದಾಖಲು

ABOUT THE AUTHOR

...view details