ಕಳೆದ ಮೂರು ವರ್ಷಗಳಿಂದ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ತೊಡಗಿಸಿಕೊಂಡಿದ್ದ ನಿರ್ದೇಶಕ ನಂದ ಕಿಶೋರ್, ಇದೀಗ 'ಪಡ್ಡೆ ಹುಲಿ' ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದ ಶ್ರೇಯಸ್ ನಟನೆಯ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ.
ಖ್ಯಾತ ನಿರ್ಮಾಪಕ ಕೆ. ಮಂಜು ಅವರ ಪುತ್ರ ನಟ ಶ್ರೇಯಸ್ ಮಂಜು ನಟನೆಯ ಚಿತ್ರದ ಚಿತ್ರೀಕರಣ ಮುಗಿಸಿ, ಆನಂತರವಷ್ಟೇ ಇನ್ನೊಂದು ಚಿತ್ರವನ್ನು ಕೈಗೆತ್ತಿಕೊಳ್ಳುವುದಾಗಿ ನಂದ ಕಿಶೋರ್ ಹೇಳಿಕೊಂಡಿದ್ದಾರೆ. ನಂದ ಕಿಶೋರ್ ಪೊಗರು ನಂತರ `ದುಬಾರಿ' ಚಿತ್ರವನ್ನು ನಿರ್ದೇಶಿಸಬೇಕಿತ್ತು. ಈಗಾಗಲೇ ಈ ಚಿತ್ರದ ಚಿತ್ರೀಕರಣ ಸಹ ಶುರುವಾಗಬೇಕಿತ್ತು. ಈ ಮಧ್ಯೆ ಶಿವರಾಜ್ಕುಮಾರ್ ಮತ್ತು ನಿಖಿಲ್ ಕುಮಾರ್ ಅಭಿನಯದ ಚಿತ್ರವೊಂದನ್ನು ನಂದಕಿಶೋರ್ ನಿರ್ದೇಶಿಸುತ್ತಾರೆ ಎಂದು ಸುದ್ದಿಯಾಗಿತ್ತು. ಕಳೆದೊಂದು ವಾರದಿಂದ ಶ್ರೇಯಸ್ ಮಂಜು ಅಭಿನಯದ ಹೊಸ ಚಿತ್ರವೊಂದನ್ನು ನಿರ್ದೇಶಿಸಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿತ್ತು. ಈ ಮೂವರಲ್ಲಿ ನಂದಕಿಶೋರ್, ಮೊದಲಿಗೆ ಯಾವ ಚಿತ್ರವನ್ನು ಕೈಗೆತ್ತಿಕೊಳ್ಳುತ್ತಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.