ಮುಂಬೈ:ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಹಾಗೂ ಡ್ರಗ್ಸ್ ಕೇಸ್ಗೆ ಸಂಬಂಧಿಸಿದಂತೆ ಇದೀಗ ಬಾಲಿವುಡ್ ನಟಿ ದೀಪಿಕಾ ಪಡುಕೊಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಮತ್ತು ರಕುಲ್ ಪ್ರೀತಿ ಸಿಂಗ್ಗೆ ನೋಟಿಸ್ ಜಾರಿಯಾಗಿದೆ.
ಡ್ರಗ್ಸ್ ಕೇಸ್: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಅನೇಕರಿಗೆ ಸಮನ್ಸ್ ಜಾರಿ - ಶ್ರದ್ಧಾ ಕಪೂರ್ಗೆ ನೋಟಿಸ್ ನೀಡಿದ ಎನ್‌ಸಿಬಿ
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಎನ್‌ಸಿಬಿ ಇದೀಗ ಮತ್ತಷ್ಟು ಜನರ ವಿಚಾರಣೆ ನಡೆಸಲು ಮುಂದಾಗಿದೆ.
ಈಗಾಗಲೇ ದೀಪಿಕಾ ಪಡುಕೊಣೆ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಅವರನ್ನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇದರ ಬೆನ್ನಲ್ಲೇ ಇದೀಗ ಸ್ಟಾರ್ ನಟಿ ದೀಪಿಕಾ ಜೊತೆಗೆ ಶ್ರದ್ಧಾ ಕಪೂರ್, ಸಾರಾ ಅಲಿಖಾನ್, ಟಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ಗೂ ಸಮನ್ಸ್ ಜಾರಿಯಾಗಿದೆ.
ಸೆಪ್ಟೆಂಬರ್ 25ರಂದು ದೀಪಿಕಾ ಹಾಗೂ ಸೆ.26ರಂದು ಉಳಿದ ನಟಿಯರು ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಹಾಗೂ ಡ್ರಗ್ಸ್ ಕೇಸ್ ವಿಚಾರವಾಗಿ ಈಗಾಗಲೇ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಎನ್‌ಸಿಬಿ ಕಸ್ಟಡಿಯಲ್ಲಿದ್ದಾರೆ.