ಹೈದರಾಬಾದ್ (ತೆಲಂಗಾಣ) :ಮಹಾ ಶಿವರಾತ್ರಿಯ ಶುಭ ಸಂದರ್ಭದಲ್ಲಿ ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರ ಬಹು ನಿರೀಕ್ಷಿತ ಭೋಲಾ ಶಂಕರ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಮೆಹರ್ ರಮೇಶ್ ನಿರ್ದೇಶನದ ಭೋಲಾ ಶಂಕರ್ ಪ್ರಸ್ತುತ ನಿರ್ಮಾಣ ಹಂತದಲ್ಲಿದೆ. ತಮಿಳಿನ ಬ್ಲಾಕ್ ಬಸ್ಟರ್ ವೇದಾಲಂನ ತೆಲುಗು ರಿಮೇಕ್ ಆಗಿರುವುದರಿಂದ ನಿರೀಕ್ಷೆ ಹೆಚ್ಚಿದೆ.
ಪೋಸ್ಟರ್ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿರುವ ಚಿರಂಜೀವಿ, ಭೋಲಾ ಶಂಕರ್ ಫಸ್ಟ್‌ಲುಕ್ ರಿಲೀಸ್ ಆಗಿದೆ. ಎಲ್ಲರಿಗೂ ಮಹಾಶಿವರಾತ್ರಿಯ ಶುಭಾಶಯಗಳು ಎಂದಿದ್ದಾರೆ. ಚಿರಂಜೀವಿ ಜೊತೆ ನಾಯಕಿಯಾಗಿ ತಮನ್ನಾ ಭಾಟಿಯಾ ಕಾಣಿಸಿಕೊಳ್ಳಲಿದ್ದರೆ, ಭೋಲಾ ಶಂಕರ್ ಚಿತ್ರದಲ್ಲಿ ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಚಿರಂಜೀವಿ ಅವರ ಸಹೋದರಿಯಾಗಿ ನಟಿಸಲಿದ್ದಾರೆ.